ಹನೂರಿನಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 110ನೇ ಜಯಂತ್ಯುತ್ಸವ

04
ಹನೂರಿನಲ್ಲಿ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 110ನೇ ಜಯಂತಿ ಆಚರಿಸುವ ಸಂಬಂಧ ಡಾ.ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದ ನಿಯೋಗ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಭೇಟಿಯಾಗಿ ಚರ್ಚಿಸಿತು. ಶಾಸಕ ಎಂ.ಆರ್.ಮಂಜುನಬಾಥ್, ಡಾ.ಎಸ್.ದತ್ತೇಶ್‌ಕುಮಾರ್, ನಿಶಾಂತ್, ಪೊನ್ನಾಚಿ ಮಹದೇವಸ್ವಾಮಿ ಇತರರು ಇದ್ದರು.
Published on

 ಹನೂರು: ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 110ನೇ ಜಯಂತಿ ಕಾರ್ಯಕ್ರಮ ಈ ಬಾರಿ ಹನೂರಿನಲ್ಲಿ ಆಯೋಜಿಸಿದ್ದು, ಡಿ.13ಕ್ಕೆ ದಿನ ನಿಗದಿಯಾಗಿದೆ.

ಸಾಲೂರು ಬೃಹನ್ಮಠದ ಪೀಠಾಧಿಪತಿ ಡಾ. ಶ್ರೀಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಶಾಸಕ ಎಂ.ಆರ್ ಮಂಜುನಾಥ್, ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಎಸ್.ದತ್ತೇಶ್‌ಕುಮಾರ್, ಸಮಾಜ ಸೇವಕ ನಿಶಾಂತ್, ನಿವೃತ್ತ ಪ್ರಾಧ್ಯಾಪಕ ಡಾ. ಶಿವರಾಜಪ್ಪ, ಪೊನ್ನಾಚಿ ಮಹದೇವಸ್ವಾಮಿ, ವೀರಶೈವ ಲಿಂಗಾಯತ ಮಹಾಸಭಾದ ಪದಾಧಿಕಾರಿಗಳು ಹಾಗೂ ಹಿರಿಯ ಮುಖಂಡರ ನಿಯೋಗ ಬುಧವಾರ ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ತೆರಳಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಅವರನ್ನು ಭೇಟಿದರು.

ಚರ್ಚೆ ನಡೆಸಿದ ಬಳಿಕ ಡಿ.13ಕ್ಕೆ ಜಯಂತಿ ಕಾರ್ಯಕ್ರಮವನ್ನು ನಿಗದಿಪಡಿಸಲಾಯಿತು. ಸುಸೂತ್ರವಾಗಿ ಜಯಂತಿ ಕಾರ್ಯಕ್ರಮಕ್ಕೆ ಅಗತ್ಯ ಸಲಹೆಯನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net