ಬಿಒಬಿ ಶಾಖೆಯಲ್ಲಿ 118ನೇ ಸಂಸ್ಥಾಪನಾ ದಿನಾಚರಣೆ

1000052625
Published on

ಹಂಪಾಪುರ: ಎಚ್.ಡಿ.ಕೋಟೆ ತಾಲೂಕು ಹಂಪಾಪುರ ಹೋಬಳಿ ಹೊಮ್ಮರಗಳ್ಳಿ ಗ್ರಾಮ ಶಾಖೆಯ ಬ್ಯಾಂಕ್ ಆಫ್ ಬರೋಡದಲ್ಲಿ 118ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಬ್ಯಾಂಕ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನವೀನ್ ಕುಮಾರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕೇಕ್ ಕತ್ತರಿಸಿ ಗ್ರಾಹಕರಿಗೆ ಸಿಹಿ ವಿತರಣೆ ಮಾಡಲಾಯಿತು. ಸಾಲ ಪಡೆದು ಸಕಾಲದಲ್ಲಿ ಹಣ ಪಾವತಿ ಮಾಡುವ ಹಾಗೂ ಉತ್ತಮ ಗ್ರಾಹಕರನ್ನು ಸನ್ಮಾನಿಸಲಾಯಿತು.

ರಾಜ್ಯ ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ಎಚ್.ಬಿ.ರಾಜೇಶ್, ಆರ್‌ಎಸ್‌ಎಸ್ ಕಾರ್ಯಕರ್ತರಾದ ಮಹೇಶ್, ಹರೀಶ್, ರಮೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net