ಫೆ.೧೧, ೧೨ ರಂದು ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

durga parameshwari
Published on

ಮಡಿಕೇರಿ: ತಾಳತ್ತಮನೆಯ ಶ್ರೀ ದುರ್ಗಾ ಭಗವತಿ ಕ್ಷೇತ್ರದಲ್ಲಿ ಶ್ರೀ ದುರ್ಗಾ ಭಗವತಿ, ಮಹಾಗಣಪತಿ ಹಾಗೂ ನಾಗ ಪರಿವಾರ ದೇವತೆಗಳ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಫೆ.೧೧ ಮತ್ತು ೧೨ ರಂದು ನಡೆಯಲಿದೆ.

ದೇವಾಲಯದಲ್ಲಿ ಎರಡು ದಿನಗಳ ನಡೆಯುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಫೆ.೧೧ ರಂದು ರಂದು ಸಂಜೆ ೫ ಗಂಟೆಗೆ ಹಸಿರು ಹೊರೆಕಾಣಿಕೆ, ಉಗ್ರಾಣ ಪೂಜೆ, ಸಂಜೆ ೬ ಗಂಟೆಗೆ ಮಡಿಕೇರಿ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ೭.೩೦ ಗಂಟೆಗೆ ದೀಪಾರಾಧನೆ, ಮಹಾಪೂಜೆ ಮತ್ತು ಅನ್ನ ಸಂತರ್ಪಣೆ ನೆರವೇರಲಿದೆ.

ಫೆ.೧೨ ರಂದು ಬೆಳಿಗ್ಗೆ ೧೦ ಗಂಟೆಯಿಂದ ಪುಣ್ಯಾಹವಾಚನ, ಗಣಪತಿ ಹೋಮ, ಕಲಶ ಪೂಜೆ, ನಾಗತಂಬಿಲ, ಗುಳಿಗ, ಚಾಮುಂಡಿ ತಂಬಿಲ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೪.೩೦ ಗಂಟೆಗೆ ಮಡಿಕೇರಿ ವಿಜಯ ವಿನಾಯಕ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ, ಸಂಜೆ ೬ ಗಂಟೆಗೆ ರಂಗಪೂಜೆ, ೭ ಗಂಟೆಯಿಂದ ದೇವರ ಬಲಿ ಉತ್ಸವ, ಮಹಾದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾಪೂಜೆ ಮತ್ತು ಅನ್ನಸಂತರ್ಪಣೆ ನೆರವೇರಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಕೋರಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net