ಯೋಗ ಪ್ರತಿಯೊಬ್ಬರ ಜೀವನಶೈಲಿಯಾಗಲಿ

21 Dwd 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಭಾರತವು ವಿಶ್ವಕ್ಕೆ ನೀಡಿದ ಬಹು ದೊಡ್ಡ ಕೊಡುಗೆ ಯೋಗ. ಮುನಷ್ಯನ ದೇಹ ಮತ್ತು ದೇಶ ಶಾಂತವಾಗಿದ್ದರೆ ಇಡೀ ವಿಶ್ವದಲ್ಲಿ ಶಾಂತಿ ನೆಲೆಸುತ್ತದೆ. ಯೋಗ ಪದದ ಅರ್ಥ ನಮ್ಮ ದೇಹ ಮತ್ತು ಮನಸ್ಸನ್ನು ಒಟ್ಟುಗೂಡಿಸುವುದು. ಯೋಗ ಪ್ರತಿಯೊಬ್ಬ ಜೀವನಶೈಲಿ ಆಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

ನಗರದ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಘಟನೆಗಳ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲರನ್ನು ಸೇರಿಸುವುದು ಯೋಗವಾಗಿದೆ. ವಿಶ್ವದಲ್ಲಿ ಚದುರಿರುವ ಮನಸ್ಸುಗಳನ್ನು ಒಂದೆಡೆ ಸೇರಿಸುವ ಶಕ್ತಿ ಯೋಗಕ್ಕಿದೆ. ಮನುಷ್ಯ ಆರೋಗ್ಯದಿಂದ ಇರಲು ಯೋಗಾಭ್ಯಾಸ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಐಎಎಸ್ ಪ್ರೊಬೇಷನರಿ ಅಧಿಕಾರಿ ರಿತಿಕಾ ವರ್ಮಾ, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಗಣೆಶ ಕಬಾಡೆ, ಜಿ.ಪಂ. ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳ ವೇದಿಕೆಯಲ್ಲಿದ್ದರು.

ಯೋಗ ಶಿಕ್ಷಕ ಜಗದೀಶ ಮಳಗಿ ಯೋಗ ಅಭ್ಯಾಸ ಮಾಡಿಸಿದರು. ಡಿಡಿಪಿಐ ಎಸ್.ಎಸ್. ಕೆಳದಿಮಠ, ತಹಸೀಲ್ದಾರ್ ಡಾ. ಡಿ.ಎಚ್. ಹೂಗಾರ, ಸರ್ಕಾರಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಸಂಘ- ಸಂಸ್ಥೆಯವರು, ಯೋಗ ಕೂಟದ ಸದಸ್ಯರು, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದವರು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net