೧೧ ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ: ಎಡಿಸಿ

raichur
raichur
Published on

ರಾಯಚೂರು ನಗರದ ಮಹ್ಮಾತಗಾಂಧಿ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ, ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ‍್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಯೋಗ ಸಂಘ ಸಂಸ್ಥೆಗಳ ವತಿಯಿಂದ ೧೧ನೇ ಅಂತರ ರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಸಾಮೂಹಿಕ ಯೋಗ ಕರ‍್ಯಕ್ರಮ ನಡೆಯಿತು.

ಆರ್‌ಡಿಎ ಅಧ್ಯಕ್ಷ ರಾಜಶೇಖರ ರಾಮಸ್ವಾಮಿ, ಜಿಪಂ ಸಿಇಓ ರಾಹುಲ್ ತುಕಾರಾಂ ಪಾಂಡ್ವೆ ಹಾಗೂ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಯೋಗ ದಿನಾಚರಣೆ ಅಂಗವಾಗಿ ಯೋಗ ಶಿಕ್ಷಕರು ವಿದ್ಯರ‍್ಥಿಗಳಿಗೆ ಹಾಗೂ ಸರ‍್ವಜನಿಕರಿಗೆ ವಿವಿಧ ಆಸನಗಳ ಅಭ್ಯಾಸ ಮಾಡಿಸಿದರು.

ಯೋಗ ಶಿಕ್ಷಕರು ವೃಕ್ಷಾಸನ, ಪಾದಹಸ್ತಾಸನ, ತಾಡಾಸನ, ತ್ರಿಕೋನಾಸನ, ಭದ್ರಾಸನ, ವಜ್ರಾಸನ, ಉಷ್ಟ್ರಾಸನ, ರ‍್ಧ ಉಷ್ಟ್ರಾಸನ, ಶಶಾಂಕಾಸನ, ಉತ್ತಾನ, ಮಂಡೂಕಾಸನ, ವಕ್ರಾಸನ, ಮಕರಾಸನ, ಭುಜಂಗಾಸನ, ಶಲಭಾಸನ, ಸೇತುಬಂಧಾಸನ, ರ‍್ಧ ಹಲಾಸನ, ಪವನಮುಕ್ತಾಸನ, ಶವಾಸನ ಹೇಳಿಕೊಟ್ಟರು.

ಕರ‍್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು, ವಿದ್ಯರ‍್ಥಿಗಳು, ಯೋಗ ಸಂಸ್ಥೆಗಳ ಪದಾಧಿಕಾರಿಗಳು, ಸರ‍್ವಜನಿಕರು ಯೋಗ ಅಭ್ಯಾಸ ಮಾಡಿದರು. ನಂತರ ಯೋಗ ದಿನಾಚರಣೆ ಅಂಗವಾಗಿ ಆಯುಷ್ ಇಲಾಖೆಯಿಂದ ನಡೆಸಲಾಗಿದ್ದ ಯೋಗಾಸನ ಸ್ರ‍್ಧೆ ಮತ್ತು ಪ್ರಬಂಧ ಸ್ರ‍್ಧೆಯಲ್ಲಿ ೨೮ ವಿಜೇತರಿಗೆ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು. ಯೋಗ ಶಿಕ್ಷಕ ತಿಮ್ಮಪ್ಪ ಎನ್.ವಡ್ಡೇಪಲ್ಲಿ ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ವೈದ್ಯಾಧಿಕಾರಿ ಡಾ.ಪೂಜಾ ಅವರು ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಅಪರ ಜಿಲ್ಲಾಧಿಕಾರಿ ಶಿವಾನಂದ ಅವರು ಮಾತನಾಡಿ, ಯೋಗ ಮತ್ತು ಪ್ರಾಣಾಯಾಮ, ದ್ಯಾನ ದಿನ ನಿತ್ಯ ಜೀವನದಲ್ಲಿ ಅಳವಡಿಸಿಕೊಂಡರೆ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ ಎಂದರು.

ಈ ವೇಳೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಂಕರಗೌಡ ಅವರು ಮಾತನಾಡಿ, ಯೋಗ ಭಾರತದ ಸಂಸ್ಕೃತಿಯ ಪ್ರತೀಕವಾಗಿದೆ. ಯೋಗ ಎಲ್ಲರ ಕಲ್ಯಾಣ ಮಾಡೋ ಭಾವನೆ ಆಗಿದೆ. ವಿಶ್ವದ ಬಹುತೇಕ ದೇಶಗಳಲ್ಲಿ ಯೋಗ ದಿನವನ್ನ ಆಚರಣೆ ಮಾಡಲಾಗುತ್ತಿದೆ. ಯೋಗ ಜೀವನವನ್ನ ಪರಿಪರ‍್ಣ ಮಾಡುತ್ತದೆ. ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ ಅನ್ನೋ ಘೋಷವಾಕ್ಯ ಉತ್ತಮವಾಗಿದೆ ಎಂದರು.

ಈ ಸಂರ‍್ಭದಲ್ಲಿ ರ‍್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೃಷ್ಣ ಶಾವಂತಗೇರಿ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನರ‍್ದೇಶಕ ವಿರೇಶ ನಾಯಕ, ಡಿಎಚ್‌ಓ ಡಾ.ಸುರೇಂದ್ರ ಬಾಬು, ಬಿಇಒ ಈರಣ್ಣ ಕೋಸಿಗೆ, ರಂಗಸ್ವಾಮಿ, ಪರಶುರಾಮ್, ಈರೇಶ್ ನಾಯ್ಕ ಸೇರಿ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net