11ರಂದು ಕನಕ ಜಯಂತಿ

2cf05fa3-0918-41cd-8534-4b61b2948382
Published on

ಮೈಸೂರು: ಜಿಲ್ಲಾಡಳಿತ ಮತ್ತು ಸಂತ ಶ್ರೀ ಕನಕದಾಸರ ಜಯಂತ್ಯುತ್ಸವ ಸಮಿತಿ ಸಹಯೋಗದಲ್ಲಿ ನ.11ರಂದು ಕಲಾಮಂದಿರದಲ್ಲಿ ಕನಕ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


ಅಂದು ಬೆಳಗ್ಗೆ 9ಕ್ಕೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಅಲಂಕೃತ ಕನಕದಾಸರ ಪ್ರತಿಮೆ ಮೆರವಣಿಗೆ ಹೊರಡಲಿದೆ. ಸುಮಾರು 30 ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಬಳಿಕ ಕಲಾಮಂದಿರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಸಂಚಾಲಕರಾದ ಎಂ.ಶಿವಣ್ಣ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ನ.12 ಹಾಗೂ 14ರಂದು ಸಿದ್ಧಾರ್ಥನಗರದಲ್ಲಿ ಕನಕಭವನದಲ್ಲಿ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net