11ರಂದು ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ

07M.D.R.5
ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಕೆಪಿಸಿಸಿ ಸದಸ್ಯ ಎಸ್.ಗುರುಚರಣ್ ಮಾತನಾಡಿದರು. ಕದಲೂರು ರಾಮಕೃಷ್ಣ, ಮೋಹನ್‌ಕುಮಾರ್, ಸಿ.ನಾಗೇಗೌಡ, ವಿನಯ್‌ರಾಮಕೃಷ್ಣ, ಕಂಠಿಸುರೇಶ್, ಶಂಕರೇಗೌಡ ಇದ್ದರು.
Published on

ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಫೆ.11ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ಕಾಂಗ್ರೆಸ್ ಸಂಭವನೀಯ ಅಭ್ಯರ್ಥಿ ಎಸ್.ಗುರುಚರಣ್ ತಿಳಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಸಮಾವೇಶಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ನಾಯಕರಾದ ಜಿ.ಪರಮೇಶ್ವರ್, ಮಹದೇವಪ್ಪ, ಸಲೀಮ್‌ಅಹಮದ್, ಡಿ.ಸಿ.ಚಂದ್ರಶೇಖರ್, ಜಿಲ್ಲಾ ನಾಯಕರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಮಧುಜಿ.ಮಾದೇಗೌಡ, ದಿನೇಶ್‌ಗೂಳಿಗೂಡ ಸೇರಿದಂತೆ ಹಲವರು ಆಗಮಿಲಿಸದ್ದಾರೆ. ಸಮಾವೇಶಕ್ಕೆ ತಾಲೂಕಿನಾದ್ಯಂತ 15 ಸಾವಿರಕ್ಕೂ ಹೆಚ್ಚಿನ ಜನರು ಸೇರಲಿದ್ದು, ಸಮಾವೇಶದ ಯಶಸ್ವಿಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಎಲ್ಲ ವಿಭಾಗಗಳ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಮಾತನಾಡಿ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷದ ಬಲವರ್ಧನೆಗೆ ಹಗಲಿರುಳು ಶ್ರಮಿಸಬೇಕು ಮತ್ತು ಚುನಾವಣೆಯಲ್ಲಿ ಎಸ್.ಗುರುಚರಣ್ ಅವರು ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲುವಂತೆ ಕಾರ್ಯತಂತ್ರ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಕಿಸಾನ್ ಅಧ್ಯಕ್ಷ ದೇಶಹಳ್ಳಿ ಆರ್.ಮೋಹನ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ನಾಗೇಗೌಡ, ಶಿವಲಿಂಗೇಗೌಡ, ಮನ್‌ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಆರ್.ಕೆ.ವಿದ್ಯಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್‌ರಾಮಕೃಷ್ಣ, ಜಿಪಂ ಮಾಜಿ ಅಧ್ಯಕ್ಷ ಸುರೇಶ್‌ಕಂಠಿ, ಮುಖಂಡರಾದ ಅಜ್ಜಹಳ್ಳಿ ರಾಮಕೃಷ್ಣ, ಶಂಕರೇಗೌಡ, ಪುಟ್ಟಸ್ವಾಮಣ್ಣ, ಕಿರಣ್, ದೊರೆಸ್ವಾಮಿ, ತಿಮಯ್ಯ, ಮನ್ಸೂರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net