

ಸವದತ್ತಿ: ವಿಷ ಬೆರೆಸಿದ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡ ಟನೆ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.
ಹೂಲಿಕಟ್ಟಿ ಗ್ರಾಮದ ಜನತಾ ಕಾಲನಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಯಾರೋ ಕೀಟನಾಶಕ ಬೆರೆಸಿದ್ದಾರೆ. ಈ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿದ ಮುಖಂಡ ಅಶ್ವತ್ಥ ವೈದ್ಯ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೀರಿನ ಮಾದರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 12 ಮಕ್ಕಳು ಸುರತರಾಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಟಿಎಚ್ಒ ಶ್ರೀಪಾದ ಸಬನೀಸ್ ತಿಳಿಸಿದ್ದಾರೆ.
ವಿಷ ಬೆರೆತ ನೀರು ಕುಡಿದ ಇನ್ನುಳಿದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಿಲ್ಲವಾದರೂ ಮುಂಜಾಗ್ರತವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಖ್ಯ ಶಿಕ ಎಸ್.ಬಿ. ಗೋರಿನಾಯ್ಕ ತಿಳಿಸಿದ್ದಾರೆ.