12 ಕೆಜಿ ಮಾದಕ ವಸ್ತು ನಾಶ

26-06-rama-madaka
Published on

ರಾಮನಗರ: ಜಿಲ್ಲಾದ್ಯಂತ ವಿವಿಧ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ 11 ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ 10 ಲಕ್ಷ ರೂ ಮೌಲ್ಯದ 12.73 ಕೆಜಿ ಮಾದಕ ವಸ್ತುಗಳನ್ನು ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಇ-ನ್ಯಾನೋ ಇನ್‌ಸಿನ್‌ಟೆಕ್ ಕಾರ್ಖಾನೆಯಲ್ಲಿ ಎಸ್ಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಾಶಪಡಿಸಲಾಯಿತು.

11ಪ್ರಕರಣಗಳಲ್ಲಿ ತನಿಖೆ ಪೂರ್ಣಗೊಂಡಿರುವ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ದ್ರವ್ಯ ವಸ್ತುಗಳನ್ನು ಗುರುವಾರ ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಪೊಲೀಸ್ ಅಧಿಕಾರಿಗಳು ನಾಶಪಡಿಸಿದರು.

ಈ ವೇಳೆ ಡಿವೈಎಸ್ಪಿಗಳಾದ ಶ್ರೀನಿವಾಸ್, ಗಿರಿ, ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್, ಹಾರೋಹಳ್ಳಿ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net