ಮೈಸೂರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯಡಿಯ 12 ಟನ್ ಅಕ್ಕಿ ವಶ

crime
Published on

ಮೈಸೂರು: ಅನ್ನ ಭಾಗ್ಯ ಯೋಜನೆಯಡಿ ನೀಡುವ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಆರೋಪಿಯ ಬಂಧಿಸಿರುವ ಸಿಸಿಬಿ ಪೊಲೀಸರು ಒಟ್ಟು 12 ಟನ್ 60 ಕೆ.ಜಿ.ಅಕ್ಕಿ ಮತ್ತು ಟ್ರಕ್ ವಶ ಪಡೆಸಿಕೊಂಡಿದ್ದಾರೆ.

ನಗರ ಮೇಟಗಳ್ಳಿ ಪೊಲೀಸ್ ಠಾಣೆಯ ಸರಹದ್ದಿನ ಬೆಂಗಳೂರು-ಮೈಸೂರು ರಸ್ತೆಯ ಸಿದ್ದಲಿಂಗಪುರದ ಬಳಿ ಅಕ್ರಮವಾಗಿ ಲಾರಿಯಲ್ಲಿ ಪಡಿತರ ಅಕ್ಕಿ ಸಾಗಿಸುತ್ತಿರುವ ಬಗ್ಗೆ ಸಿಸಿಬಿ ಘಟಕದ ಅಧಿಕಾರಿಗಳಿಗೆ ಬಂದ ಖಚಿತ ಮಾಹಿತಿ ದೊರೆತ್ತಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಬೆಂಗಳೂರು ಕಡೆಗೆ ಸಾಗುತ್ತಿದ್ದ ಟ್ರಕ್ ಅನ್ನು ಪರಿಶೀಲಿಸಿದ್ದಾರೆ.

ಸದರಿ ಟ್ರಕ್‌ನಲ್ಲಿ ಒಟ್ಟು 4,17,276 ರೂ. ಮೌಲ್ಯದ ಪಡಿತರ ಅಕ್ಕಿ ಚೀಲಗಳನ್ನು ಅಕ್ರಮವಾಗಿ ಬೆಂಗಳೂರು ಕಡೆಗೆ ಸಾಗಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಸದರಿ ಆಸಾಮಿಯು ಯಾವುದೇ ರಹದಾರಿ ಅಥವಾ ಖರೀದಿ ಮಾಡಿದ ಬಿಲ್ಲು ಇಲ್ಲದೆ ಅಕ್ಕಿಯನ್ನು ಸಾಗಿಸುತ್ತಿದ್ದರಿಂದ ಮಾಲು ಮತ್ತು ಲಾರಿಯನ್ನು ಅಮಾನತ್ತು ಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net