

ಚಿತ್ರದುರ್ಗ: ಜಿಲ್ಲಾ ಕೇಂದ್ರದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಹಾಗೂ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
ಜಯಂತ್ಯುತ್ಸವಗಳ ಸಂಬಂಧ ಡಿಸಿ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, 12ರಂದು ಬೆಳಗ್ಗೆ 11ಕ್ಕೆ ಡಿಸಿ ಕಚೇರಿಯಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತಿ, 14ರಂದು ಬೆಳಗ್ಗೆ 11.30ಕ್ಕೆ ತರಾಸು ರಂಗಮಂದಿರದಲ್ಲಿ ಯೋಗಿನಾರೇಯಣ ಯತೀಂದ್ರರ(ಕೈವಾರ ತಾತಯ್ಯ)ಜಯಂತಿ ಆಚರಿಸಲು ನಿರ್ಧರಿಸಲಾಗಿದೆ. ಕೈವಾರ ತಾತಯ್ಯ ಜಯಂತಿ ಅಂಗವಾಗಿ ಅಂದು ನಗರದ ಹೊಳಲ್ಕೆರೆ ರಸ್ತೆಯ ಗಾಯತ್ರಿ ವೃತ್ತದಿಂದ ತರಾಸು ರಂಗಮಂದಿರದವರೆಗೆ ಮೆರವಣಿಗೆ ನಡೆಸಲು ಸಭೆ ತೀರ್ಮಾಸಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ, ಅಖಿಲ ಭಾರತ ವೀರಶೈವ ಸಮಾಜದ ಮಹಡಿ ಶಿವಮೂರ್ತಿ, ಆರತಿ ಮಹಡಿ ಶಿವಮೂರ್ತಿ, ಬೇಡ ಜಂಗಮ ಸಮಾಜದ ಷಡಕ್ಷರಯ್ಯ, ಮಲ್ಲಿಕಾರ್ಜುನ್, ರುದ್ರೇಶ್, ಶಶಿಧರ್, ಜಿತೇಂದ್ರ ಹುಲಿಕುಂಟೆ, ಬಲಿಜ ಸಮುದಾಯದ ಸೇತುರಾಂ, ಗಂಗಣ್ಣ, ಸೂರ್ಯನಾರಾಯಣ, ವಿರೂಪಾಕ್ಷ, ಪ್ರಹ್ಲಾದ್, ಶೋಭಾ, ಹೇಮಾವತಿ ಮತ್ತಿತರರು ಇದ್ದರು.