1200 ಮಾಸ್ಕ್ ವಿತರಣೆ

29mahesh7
Published on

ಚಾಮರಾಜನಗರ: ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ 1200 ಮಾಸ್ಕ್‌ಗಳನ್ನು ವಿತರಿಸಲಾಯಿತು.

ನಗರದ ಹೊರವಲಯದಲ್ಲಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಭೇಟಿ ನೀಡಿದ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಡಾ.ಮಹೇಶ್ ಅವರು ಡೀನ್ ಡಾ.ಸಂಜೀವ್ ಅವರಿಗೆ ಮಾಸ್ಕ್‌ಗಳನ್ನು ಹಸ್ತಾಂತರಿಸಿದರು.

ಇದೇ ವೇಳೆ ಮಾತನಾಡಿದ ಅವರು, ಮೆಡಿಕಲ್ ಕಾಲೇಜಿನ ಲ್ಯಾಬ್‌ಗಳಲ್ಲಿ ಕಾರ್ಯ ನಿರ್ವಹಿಸುವವರಿಗಾಗಿ ಉತ್ತಮ ಗುಣಮಟ್ಟದ ಮಾಸ್ಕ್‌ಗಳನ್ನು ನೀಡುತ್ತಿದ್ದೇವೆ. ಲ್ಯಾಬ್‌ಗಳಲ್ಲಿ ರೋಗಾಣುಗಳನ್ನು ಪರೀಕ್ಷೆ ಮಾಡುವಾಗ ಗುಣಮಟ್ಟದ ಮಾಸ್ಕ್‌ಗಳನ್ನು ಧರಿಸುವುದು ಅಗತ್ಯವಾಗಿದ್ದು, ರೋಗಾಣುಗಳಿಂದ ರಕ್ಷಿಸಿಕೊಳ್ಳಬಹುದು ಎಂದರು.

ಜಿಲ್ಲಾ ಸರ್ಜನ್ ಡಾ.ಕೃಷ್ಣಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ, ದಂತ ವೈದ್ಯೆ ಡಾ.ಗಾಯತ್ರಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net