

ಮಂಗಳೂರು: ನಗರದ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ 2025ರ ಮಾರ್ಚ್ 31ಕ್ಕೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13 ಕೋಟಿ ರೂ. ವ್ಯಾವಹಾರಿಕ ಲಾಭ ಗಳಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ ಶೇ. 1.30 ಎನ್.ಪಿ.ಎ. ದಾಖಲಿಸಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, 2024-25ನೇ ವಿತ್ತೀಯ ವರ್ಷದಲ್ಲಿ ಬೆಳ್ತಂಗಡಿ ಮತ್ತು ಬೆಳ್ಮಣ್‌ನಲ್ಲಿ ಕ್ರಮವಾಗಿ 18ನೇ ಮತ್ತು 19ನೇ ಶಾಖೆಯನ್ನು ತೆರೆದಿದ್ದು, ಬೈಂದೂರ್‌ನಲ್ಲಿ ಶೀಘ್ರದಲ್ಲೇ ಶಾಖೆಯನ್ನು ತೆರೆಯಲಾಗುವುದು. ಅನಿವಾಸಿ ಭಾರತೀಯರಿಗೆ (ಎನ್‌ಆರ್‌ಐ) ಸೇವಾ ಸೌಲಭ್ಯವನ್ನು ನೀಡುವ ಕರ್ನಾಟಕದ ಪಟ್ಟಣ ಸಹಕಾರಿ ಬ್ಯಾಂಕುಗಳ ಪೈಕಿ ಎರಡನೇ ಬ್ಯಾಂಕ್ ಎಂಸಿಸಿ ಬ್ಯಾಂಕ್ ಆಗಿರುತ್ತದೆ ಎಂದರು.
ಬ್ಯಾಂಕಿನ ನಿವ್ವಳ ಮೌಲ್ಯ ರೂ. 76 ಕೋಟಿಯಿಂದ ರೂ.86.68 ಕೋಟಿಗೆ ತಲುಪಿದೆ. ಬ್ಯಾಂಕಿನ ವ್ಯವಹಾರ ರೂ. 1240 ಕೋಟಿ ದಾಟಿದ್ದು, ಕಳೆದ ವರ್ಷಕ್ಕಿಂತ ಶೇಕಡಾ 15 ಏರಿಕೆಯಾಗಿದೆ. ಒಟ್ಟು ಠೇವಣಿಯಲ್ಲಿ ಶೇ. 11 ಪ್ರಗತಿ ಸಾಧಿಸಿದ್ದು, ರೂ.705.40 ಕೋಟಿ ಠೇವಣಿ, ಒಟ್ಟು ಮುಂಗಡದಲ್ಲಿ ಶೇಕಡಾ 20.37 ಪ್ರಗತಿ ಸಾಧಿಸಿದ್ದು ರೂ.535.49 ಕೋಟಿ ಮುಂಗಡಗಳು, ದುಡಿಯುವ ಬಂಡವಾಳ ರೂ.836.73 ಕೋಟಿ (ಪ್ರಗತಿ ಶೇಕಡಾ 11.13) ಮತ್ತು ಶೇರು ಬಂಡವಾಳ ರೂ.32.43 ಕೋಟಿ (ಪ್ರಗತಿ ಶೇಕಡಾ 3.91) ಆಗಿರುತ್ತದೆ ಎಂದರು.
ಬ್ಯಾಂಕ್ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವ, ನಿರ್ದೇಶಕರಾದ ಆಂಡ್ರ್ಯೂ ಡಿಸೋಜ, ಡಾ. ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್ ಡಿಸೋಜ, ಎಲ್ರೊಯ್ ಕಿರಣ್ ಕ್ರಾಸ್ಟೊ, ಹೆರಾಲ್ಡ್ ಮೊಂತೇರೊ, ರೋಶನ್ ಡಿಸೋಜ, ಮೆಲ್ವಿನ್ ವಾಸ್, ವಿನ್ಸೆಂಟ್ ಲಸ್ರಾದೊ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್ ರೆಬೆಲ್ಲೊ, ಡಾ. ಫ್ರೀಡಾ ಡಿಸೋಜ, ಆಲ್ವಿನ್ ಪಿ. ಮೊಂತೆರೊ, ೆಲಿಕ್ಸ್ ಡಿಕ್ರೂಜ್, ಶರ್ಮಿಳಾ ಮಿನೇಜಸ್ ಹಾಗೂ ಮಹಾ ಪ್ರಬಂಧಕ ಸುನಿಲ್ ಮಿನೇಜಸ್ ಉಪಸ್ಥಿತರಿದ್ದರು.
------------------
ರೂ. 1500 ಕೋಟಿ ವ್ಯವಹಾರದ ಗುರಿ
ಜುಲೈ ಅಂತ್ಯದೊಳಗೆ ಬೈಂದೂರಿನಲ್ಲಿ 20ನೇ ಶಾಖೆ ಕಾರ್ಯಾರಂಭಗೊಳ್ಳಲಿದೆ, ಮುಂದಿನ ಜೂನ್ ಅಂತ್ಯದೊಳಗೆ ಸ್ವಂತ ಕಟ್ಟಡಕ್ಕೆ ಕುಲಶೇಖರ ಎಂ.ಸಿ.ಸಿ ಬ್ಯಾಂಕ್ ಲಿಮಿಟೆಡ್ ಶಾಖೆಯ ಸ್ಥಳಾಂತರ, ಗ್ರಾಹಕರ ಸುಲಭ ವ್ಯವಹಾರಕ್ಕಾಗಿ ಎಂ.ಸಿ.ಸಿ ಬ್ಯಾಂಕ್ ಗೂಗಲ್ ಪೇ, ೊನ್ ಪೇ, ಯುಪಿಎ ಸೌಲಭ್ಯಗಳನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅತ್ಯುತ್ತಮ ಗ್ರಾಹಕ ಸೇವೆಯನ್ನು ನೀಡುವ ಮೂಲಕ ಮುಂದಿನ ಮಾರ್ಚ್ ಅಂತ್ಯದೊಳಗೆ ರೂ. 1500 ಕೋಟಿ ವ್ಯವಹಾರದ ಗುರಿ ಹೊಂದಲಾಗಿದೆ ಎಂದು ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದರು.