ಚಾಮರಾಜನಗರ: ಕಬ್ಬು ಕಟಾವು ಮಾಡುತ್ತಿದ್ದ ಜಮೀನಿನಲ್ಲಿ ಭಾರಿ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅದನ್ನು ಸೆರೆ ಹಿಡಿದು ರಕ್ಷಣೆ ಮಾಡಲಾಗಿದೆ.ನಗರದ ಕರಿನಂಜನಪುರ ಗ್ರಾಮದ ಮಣಿ ಅವರ ಜಮೀನಿನಲ್ಲಿ ಮಂಗಳವಾರ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಹೆಬ್ಬಾವು ಕಾಣಿಸಿಕೊಂಡಿದೆ. ಈ ವೇಳೆ ಸ್ಥಳೀಯರು ಸ್ನೇಕ್ ಅಶೋಕ್ ಅವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಸುಮಾರು 13 ಅಡಿ ಉದ್ದದ 30-40 ಕೆಜಿ ತೂಕದ ಹೆಬ್ಬಾವನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟರು.