

ಕಂಪ್ಲಿ: ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ವಸತಿ ಯೋಜನೆಯಡಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಎಮ್ಮಿಗನೂರು ಗ್ರಾಪಂ ವ್ಯಾಪ್ತಿಯ ಶ್ರೀರಾಮಚಂದ್ರಾಪುರ ಕ್ಯಾಂಪಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. 133 ಫಲಾನುಭವಿಗಳಿಗೆ ಪಟ್ಟಾ ವಿತರಿಸಲಾಗಿದೆ. ಶ್ರೀರಾಮಚಂದ್ರಾಪುರದಿಂದ ಎಮ್ಮಿಗನೂರಿಗೆ 3 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಿಸಲಾಗುವುದು. ಸಾರಿಗೆ ಬಸ್ ವ್ಯವಸ್ಥೆ, ಅಂಗನವಾಡಿಗೆ ವಿದ್ಯುತ್ ಸೌಲಭ್ಯಕ್ಕೆ ವಿದ್ಯುತ್ ಕಂಬ ಹಾಕಲಾಗುವುದು. ಗ್ರಾಮಸ್ಥರ ಕುಂದುಕೊರತೆಗಳಿಗೆ ಸ್ಪಂದಿಸುತ್ತೇನೆ ಎಂದರು.
ತಹಸೀಲ್ದಾರ್ ಜೂಗಲ ಮಂಜುನಾಯಕ, ಕಂದಾಯ ಅಧಿಕಾರಿ ವೈ.ಎಂ.ಜಗದೀಶ, ಗ್ರಾಮ ಆಡಳಿತ ಅಧಿಕಾರಿ ಎಚ್.ವಿ.ಮಂಜುನಾಥ, ಎಮ್ಮಿಗನೂರು ಗ್ರಾಪಂ ಅಧ್ಯಕ್ಷೆ ಎಚ್.ಜೆ.ಶಾರದಾ, ಸದಸ್ಯ ಸಂತೋಷಗೌಡ, ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಸದಸ್ಯ ನಾಗರಾಜ, ರೈತ ಸಂಘದ ಅಧ್ಯಕ್ಷ ವಿ.ವೀರೇಶ ಇತರರಿದ್ದರು.