ಮತದಾರರಲ್ಲದವರು ಕ್ಷೇತ್ರ ಬಿಟ್ಟು ತೆರಳಿ : 13ರಂದು ಮತದಾನ ; ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ

dc
Published on

ರಾಮನಗರ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ನ.13ರಂದು ನಡೆಯಲಿದೆ. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಕ್ಷೇತ್ರದ ಮತದಾರರಲ್ಲದವರು ನ.11ರ ಸೋಮವಾರ ಸಂಜೆ 5.30ರ ನಂತರ ಕ್ಷೇತ್ರ ಬಿಟ್ಟು ಹೊರಹೋಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತದಾರರಲ್ಲದವರು ನ.11ರ ಸಂಜೆ 5.30ರ ನಂತರ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವಂತಿಲ್ಲ. ಆ ವೇಳೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳುವ ಕಾರಣ ಈ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೋಟೆಲ್‌ಗಳು, ರೆಸಾರ್ಟ್, ಹೋಂ ಸ್ಟೇ, ಕಲ್ಯಾಣ ಮಂಟಪಗಳ ವಾಲೀಕರಿಗೆ ಈ ಬಗ್ಗೆ ವಾಹಿತಿ ನೀಡಿದ್ದು, ಅವರಿಂದ ಕ್ಷೇತ್ರದ ಮತದಾರರಲ್ಲದವರು ಅಥವಾ ಕ್ಷೇತ್ರದ ಚುನಾವಣಾ ಗುರುತಿನ ಚೀಟಿ ಇಲ್ಲದವರ ವಾಸ್ತವ್ಯಕ್ಕೆ ಅವಕಾಶ ನೀಡುವುದಿಲ್ಲ ಎಂಬುದಾಗಿ ಪ್ರಮಾಣಪತ್ರ ಪಡೆಯಲಾಗುತ್ತಿದೆ ಎಂದರು.

ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮನೆ ಮನೆಗೆ ತೆರಳಿ ಪ್ರಚಾರ ವಾಡಬಹುದು. ಮಾದರಿ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು 16 ಎಸ್‌ಎಸ್‌ಟಿ ತಂಡ ಮತ್ತು 9 ಎಫ್‌ಎಸ್‌ಟಿ ತಂಡ ನಿಯೋಜಿಸಲಾಗಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 276 ಮತಗಟ್ಟೆಗಳನ್ನು ರಚಿಸಲಾಗಿದ್ದು, ಎಲ್ಲ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್ ಪ್ರಕ್ರಿಯೆಗೆ ವ್ಯವಸ್ಥೆ ವಾಡಿಕೊಳ್ಳಲಾಗಿದೆ. 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ. ಅವರು ಚುನಾವಣಾ ವೀಕ್ಷಕರ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಾರೆ ಎಂದರು.

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವ್ಯಕ್ತಿಯೊಬ್ಬರು ಗರಿಷ್ಠ 50 ಸಾವಿರ ರೂ. ನಗದನ್ನು ಸಾಗಿಸಬಹುದಾಗಿದೆ. ಅದಕ್ಕೂ ಹೆಚ್ಚಿನ ಮೊತ್ತ ಕೊಂಡೊಯ್ಯಬೇಕಾದರೆ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಮಾತನಾಡಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ 8 ಪ್ಯಾರಾ ಮಿಲಿಟರಿ ತಂಡ ಜಿಲ್ಲೆಗೆ ಆಗಮಿಸಿದೆ. ಅದರಲ್ಲಿ 7 ಪ್ಯಾರಾ ಮಿಲಿಟರಿ ಪಡೆಯನ್ನು 197 ಮತಗಟ್ಟೆಗಳ ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ. 119 ಕ್ರಿಟಿಕಲ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಒಬ್ಬರು ಪೊಲೀಸ್ ಹಾಗೂ ಒಬ್ಬರು ಗಹ ರಕ್ಷಕರು (ಹೋಮ್ ಗಾರ್ಡ್) ಇರುತ್ತಾರೆ. ಸಾವಾನ್ಯ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ 54 ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್‌ಐ ರ‌್ಯಾಂಕ್ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಇದುವರೆಗೆ ಮಾದರಿ ನೀತಿ ಸಂಹಿತೆ ಉಲ್ಲಂನೆಯ ಒಟ್ಟು 14 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವುಗಳಲ್ಲಿ ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವ 9 ಅಬಕಾರಿ ಪ್ರಕರಣಗಳು ಸೇರಿವೆ, 676 ಸೀರೆ/ವಸ್ತ್ರಗಳನ್ನು ಜಪ್ತಿ ವಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಾನೇಜರ್ ಹಾಗೂ ಮತ್ತೊಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ ಎಂದರು.

ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಹಾಗೂ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ಟಿ.ವಿ. ಸುರೇಶ್ ಮತ್ತು ರಾಮಚಂದ್ರ ಇದ್ದರು.

ದೂರು ದಾಖಲಿಸಲು 1950ಗೆ ಕರೆ ಮಾಡಿ

ಹಣ ಇತರ ಆಮಿಷಗಳನ್ನೊಡುತ್ತಿದ್ದರೆ ದೂರು ದಾಖಲಿಸಲು 1950ಗೆ ಕರೆಮಾಡಬಹುದು ಅಥವಾ ಸಿವಿಷಲ್ ಆ್ಯಪ್ ಮೂಲಕ ದೂರು ನೀಡಬಹುದಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರಂತೆ ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 2024ರ ನ.12ರ ಮಂಗಳವಾರ ಸಂಜೆ 6 ಗಂಟೆಯಿಂದ ನ.14ರ ಗುರುವಾರ ಬೆಳಗ್ಗೆ 6 ಗಂಟೆವರೆಗೆ ವಿವಿಧ ಷರತ್ತು ವಿಧಿಸಿ, ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಹಾಗೂ ನ.11ರಂದು ಸಂಜೆ 6 ಗಂಟೆಯಿಂದ ನ.14ರಂದು ಬೆಳಗ್ಗೆ 6 ಗಂಟೆವರೆಗೆ 185ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲ ರೀತಿಯ ಮದ್ಯದ ಸನ್ನದುಗಳನ್ನು ಮುಚ್ಚಲು ಮತ್ತು ಮದ್ಯ ವಾರಾಟ, ಹಂಚಿಕೆ, ಸಾಗಾಣಿಕೆಯನ್ನು ನಿಷೇಧಿಸಿ ಶುಷ್ಕ ದಿನ (ಡ್ರೈಡೇ) ಎಂದು ೋಷಿಸಿ ಈಗಾಗಲೇ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಚುನಾವಣಾ ಮತದಾನಕ್ಕೆ ಪಿಆರ್‌ಒ, ಎಪಿಆರ್‌ಓ ಹಾಗೂ ಪಿಒಎಸ್ ಸೇರಿ 1,252 ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇವರಿಗೆ ಅ. 26 ಹಾಗೂ ನ.5 ರಂದು ತರಬೇತಿ ನೀಡಲಾಗಿದೆ ಹಾಗೂ 119 ಮೈಕ್ರೋ ವೀಕ್ಷಕರಿಗೆ ನ.5 ಹಾಗೂ 8ರಂದು ತರಬೇತಿ ನೀಡಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net