13ರಂದು ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ

Published on

ಗೋಣಿಕೊಪ್ಪ: ಗೋಣಿಕೊಪ್ಪ ಪಿಸಿ ಕ್ಲಬ್ ಹಾಗೂ ಜೆಸಿಐ ಪೊನ್ನಂಪೇಟೆ ನಿಸರ್ಗ ಸಂಸ್ಥೆ ವತಿಯಿಂದ ನ.13ರಂದು ಗೋಣಿಕೊಪ್ಪ ಅನುದಾನಿತ ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಗೋಣಿಕೊಪ್ಪ ಪಿಸಿ ಕ್ಲಬ್ ಅಧ್ಯಕ್ಷ ಪೊನ್ನಿಮಾಡ ಅರ್. ಪ್ರದೀಪ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.


ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಮತ್ತು ಮುಕ್ತ ವಿಭಾಗದಲ್ಲಿ ಭಾಗವಹಿಸಬಹುದಾಗಿದ್ದು, ಅಂದು ಬೆಳಗ್ಗೆ 9 ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿದೆ. ಚೆಸ್ ಬೋರ್ಡ್ ಅನ್ನು ಸ್ಪರ್ಧಿಗಳೇ ತರಬೇಕಿದೆ. ನ.11ರೊಳಗೆ ಮೊ: 9448383910/9972538030 ಸಂಖ್ಯೆಯಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಗೋಷ್ಠಿಯಲ್ಲಿ ಸಲಹೆಗಾರ ಟಿ.ಜೆ.ಆಂಥೋನಿ, ಶಾಜಿ ಅಚ್ಚುತ್ತನ್, ಜೆಸಿಐ ಪೊನ್ನಂಪೇಟೆ ನಿಸರ್ಗ ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net