13ರಂದು ಜಿಲ್ಲಾ ಸಿರಿಧಾನ್ಯ ಪಾಕ ಸ್ಪರ್ಧೆ

millets
Published on

ಚಿತ್ರದುರ್ಗ:ಅಂತಾರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳದ ಅಂಗವಾಗಿ ಡಿ.23ರಂ ದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಇದರ ಪೂರ್ವಭಾವಿಯಾಗಿ ಡಿ.13ರಂದು ಬೆಳಗ್ಗೆ 11ಕ್ಕೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾಮಟ್ಟದ ಸಿರಿಧಾನ್ಯಪಾಕ ಸ್ಪರ್ಧೆ ಏರ್ಪಡಿಸಲಾಗಿದೆ. ಕೃಷಿ ಇಲಾಖೆ ಅಧಿಕಾರಿ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳನ್ನು ಹೊರತುಪಡಿಸಿ,ಜಿಲ್ಲೆಯ ಎಲ್ಲ ಸಾ ರ್ವಜನಿಕರು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಭಾವಚಿತ್ರ ಹೆಸರು, ವಿಳಾಸ ಹಾಗೂ ಖಾದ್ಯ,ಅಗತ್ಯ ಸಾಮಗ್ರಿ, ತಯಾರಿಕೆ ಸಮಯ ಹಾಗೂ ವಿಧಾನದ ಸಂಕ್ಷಿಪ್ತ ಮಾಹಿತಿಯೊಂದಿಗೆ ಡಿ.12ರೊಳಗೆ ್ಜಜ್ಟಜ್ಚಿಠಿಃಟಟ.್ಚಟ.ಜ್ಞಿ/ ್ಜಜ್ಟಜ್ಚಿಠಿಃಜಞಜ್ಝಿ.್ಚಟಞ,ಖುದ್ದು ಅಥವಾ ಅಂಚೆ ಮುಖಾಂತರ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಎಪಿಎಂಸಿ ರಸ್ತೆ, ಚಿತ್ರದುರ್ಗ-577501 ಈ ವಿಳಾಸಕ್ಕೆ ಕಳುಹಿಸಲು ತಿಳಿಸಲಾಗಿದೆ. ಜಿಲ್ಲಾಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ರಾಜ್ಯಮಟ್ಟದ ಸ್ಪರ್ಧೆಗೆ ಕಡ್ಡಾಯವಾಗಿ ಭಾಗವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net