

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಏ.13ರಂದು ಬಿಜೆಪಿ ಜಿಲ್ಲೆಯ ವಿವಿಧೆಡೆ ಆಯೋಜಿಸಿರುವ ಪ್ರಚಾರ ಸಭೆಗಳಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಅವರ ಪರ ಮತಯಾಚಿಸಲಿದ್ದಾರೆ.ಬೆಂಗ ಳೂರಿಂದ ಅಂದು ಬೆಳಗ್ಗೆ 11.15ಕ್ಕೆ ಹೆಲಿಕಾಫ್ಟರ್ ಮೂಲಕ ಮೊಳಕಾಲ್ಮೂರು ತಾಲೂಕು ರಾಂಪುರಕ್ಕೆ ಆಗಮಿಸಲಿದ್ದಾರೆ. 11.30ಕ್ಕೆ ರಾಂಪುರ ಬಸ್ ನಿಲ್ದಾಣ ಬಳಿ ಏರ್ಪಡಿಸಿರುವ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಅವರು ಮಾತನಾಡಲಿದ್ದಾರೆ.
ಅಲ್ಲಿಂದ ಮಧ್ಯಾಹ್ನ 1.15ಕ್ಕೆ ಚಳ್ಳಕೆರೆಗೆ ರಸ್ತೆ ಮೂಲಕ ಆಗಮಿಸಿ 2 ಗಂಟೆಗೆ ಅಲ್ಲಿಯ ರಾಘವೇಂದ್ರ ಕನ್ವೇಷನ್ ಹಾಲ್‌ನಲ್ಲಿ ಏರ್ಪಡಿಸಿರುವ ಸಾ ರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು 3.50ಕ್ಕೆ ಹಿರಿಯೂರಿಗೆ ಆಗಮಿಸಿ ತಹಾ ಕನ್ವಿಷನ್‌ಹಾಲ್‌ನಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಅವರು ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.
ರಾಂಪುರ,ಚಳ್ಳಕೆರೆ ಮತ್ತು ಹಿರಿಯೂರಲ್ಲಿ ಆಯೋಜಿಸಿರುವ ಸಭೆಗಳಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ,ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ,ಶಾಸಕ ಡಾ.ಎಂ.ಚಂದ್ರಪ್ಪ,ಲೋಕಸಭಾ ಚುನಾವಣೆ ಕ್ಷೇತ್ರ ಉಸ್ತುವಾರಿ ಎಸ್.ಲಿಂಗಮೂರ್ತಿ,ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್,ವೈ.ಎ.ನಾರಾಯಣಸ್ವಾಮಿ,ಚಿದಾನಂದಗೌಡ,ಕೆ.ಎಸ್.ನವೀನ್,ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ,ನೇರ‌್ಲಗುಂಟೆ ತಿಪ್ಪೇಸ್ವಾಮಿ,ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರುಳಿ ಮತ್ತಿತರರು ಭಾಗವಹಿಸಲಿದ್ದಾರೆಂದು ಬಿಜೆಪಿ ಜಿಲ್ಲಾ ವಕ್ತಾರರಾದ ದಗ್ಗೆ ಶಿವಪ್ರಕಾಶ್ ಹಾಗೂ ನಾಗರಾಜ್‌ಬೇದ್ರೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.