

ಕೊಡಗು : ಅರಮಣಮಾಡ ಒಕ್ಕ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ಬಾಳೆಲೆಯ ವಿಜಯಲಕ್ಷ್ಮೀ ಮತ್ತು ಸರ್ಕಾರಿ ಶಾಲಾ ಮೈದಾನದಲ್ಲಿ ಆಯೋಜಿಸಿರುವ ಅರಮಣಮಾಡ ಕ್ರಿಕೆಟ್ ನಮ್ಮೆಯಲ್ಲಿ 12 ನೇ ದಿನದ ಪಂದ್ಯಾಟದಲ್ಲಿ 14 ತಂಡಗಳು ಗೆಲುವಿನ ನಗೆ ಬೀರಿದವು.
ಅಣ್ಣೀರ ಮತ್ತು ಕೊಟ್ಟಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅಣ್ಣೀರ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿತು. ಕೊಟ್ಟಂಗಡ ತಂಡ 3.3 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಗುರಿ ತಲುಪಿತು.
ಅಟ್ರಂಗಡ ಮತ್ತು ಕೈಪಟೀರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅಟ್ರಂಗಡ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತು. ಕೈಪಟಿರ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 115 ರನ್ ಗಳಿಸಿ 25 ರನ್ ಗಳ ಸೋಲು ಕಂಡಿತು.
ಪುದಿಯಂಡ ಮತ್ತು ತೀತೀರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ತೀತೀರ ತಂಡ 8 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 58 ರನ್ ಗಳಿಸಿತು. ಪುದಿಯಂಡ ತಂಡ 3.4 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ಗೆಲುವು ಸಾಧಿಸಿತು.
ಮೂಕಳೇರ ಮತ್ತು ಕಳಿಯಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮೂಕಳೇರ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿತು. ಕಳಿಯಂಡ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 40 ರನ್ ಗಳಿಸಿ 88 ರನ್ ಗಳ ಸೋಲನುಭವಿಸಿತು.
ಹಂಚೆಟ್ಟಿರ ಮತ್ತು ಪಾಲಚಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಹಂಚೆಟ್ಟಿರ ತಂಡ 8 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 61 ರನ್ ಗಳಿಸಿತು. ಪಾಲಚಂಡ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಮುಕ್ಕಾಟಿರ (ಬೇತ್ರಿ) ಮತ್ತು ಚೇರಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮುಕ್ಕಾಟಿರ ತಂಡ 8 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 73 ರನ್ ಗಳಿಸಿತು. ಚೇರಂಡ ತಂಡ 6.4 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಅಚ್ಚಕಾಳೇರ ಮತ್ತು ಕೂಪದಿರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಕೂಪದರಿ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 94 ರನ್ ಗಳಿಸಿತು. ಅಚ್ಚಕಾಳೇರ ತಂಡ 5.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಮೈದಾನ ಎರಡರಲ್ಲಿ ಚೋಡುಮಾಡ ಮತ್ತು ನಾಟೋಳಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಚೋಡುಮಾಡ ತಂಡ 8 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 58 ರನ್ ಗಳಿಸಿತು. ನಾಟೋಳಂಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು.
ಪಾರುವಂಗಡ ಮತ್ತು ಬೊಪ್ಪತಂಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಬೊಪ್ಪತಂಡ ತಂಡ 8 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿತು. ಪಾರುವಂಗಡ ತಂಡ 4.2 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಗುಮ್ಮಟಿರ ಮತ್ತು ದಾಸಂಡ ತಂಡದ ಪಂದ್ಯಾಟದಲ್ಲಿ ದಾಸಂಡ ತಂಡ ವಾಕ್ ಓವರ್ ಪಡೆಯಿತು.
ಬಲ್ಲಂಡ ಮತ್ತು ಮಾಟಿಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಬಲ್ಲಂಡ ತಂಡ 8 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಕಾಟಿಮಾಡ ತಂಡ 8 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 88 ರನ್ ಗಳಿಸಿ 78 ರನ್ ಗಳಿಂದ ಸೋಲು ಕಂಡಿತು.
ಮಹಿಳೆಯರ ವಿಭಾಗ :
ನಾಗಂಡ ಮತ್ತು ತೀತಮಾಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ನಾಗಂಡ ತಂಡ 5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 45 ರನ್ ಗಳಿಸಿತು. ತೀತಮಾಡ ತಂಡ 3 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ 44 ರನ್ ಗಳಿಸಿ 1 ರನ್ ಗಳಿಂದ ಸೋಲು ಕಂಡಿತು. ಅಚ್ಚಪಂಡ ಮತ್ತು ಅಲಮೇಂಗಡ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಅಲಮೇಂಗಡ ತಂಡ 5 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 37 ರನ್ ಗಳಿಸಿತು. ಅಚ್ಚಪಂಡ ತಂಡ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿ 4 ರನ್ ಗಳಿಂದ ಸೋಲು ಕಂಡಿತು.
ಮಣವಟ್ಟಿರ ಮತ್ತು ಕೆಲೇಟಿರ ತಂಡಗಳ ನಡುವೆ ನಡೆದ ಪಂದ್ಯಾಟದಲ್ಲಿ ಮಣವಟ್ಟಿರ ತಂಡ 5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 41 ರನ್ ಗಳಿಸಿತು. ಕೆಲೇಟಿರ ತಂಡ 3 ಓವರ್‌ಗಳಲ್ಲಿ ವಿಕೆಟ್ ನಷ್ಟಕ್ಕೆ 23 ರನ್ ಗಳಿಸಿ 18 ರನ್ ಗಳ ಸೋಲು ಕಂಡಿತು.