14 ಜನರು ದೇಹದಾನಕ್ಕೆ ನೋಂದಣಿ

21
Published on

ಮೈಸೂರು: ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಅಂಗವಾಗಿ ಜೆಎಸ್‌ಎಸ್ ಆಸ್ಪತ್ರೆ ಹಾಗೂ ಜೆಎಸ್‌ಎಸ್ ಎಎಚ್‌ಇಆರ್ ವತಿಯಿಂದ ನಗರದ ಸುತ್ತೂರು ಮಠದಲ್ಲಿ ಗುರುವಾರ ಏರ್ಪಡಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮವನ್ನು ರಾಜ್ಯಪಾಲ ಥಾವರಚಂದ್ ಗೆಹಲೋತ್ ಉದ್ಘಾಟಿಸಿದರು.

50ಕ್ಕೂ ಹೆಚ್ಚು ಜನರು ರಕ್ತದಾನ, 14 ಜನರು ದೇಹದಾನ ಹಾಗೂ 11 ಜನರು ನೇತ್ರದಾನಕ್ಕೆ ನೋಂದಾಯಿಸಿಕೊಂಡರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮೇಯರ್ ಸುನಂದಾ ಪಾಲನೇತ್ರ, ಜೆಎಸ್‌ಎಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ.ಸಿ.ಪಿ. ಮಧು, ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಪಿ. ಪಲ್ಲವಿ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net