141 ಕ್ವಿಂಟಾಲ್ ಪಡಿತರ ರಾಗಿ ವಶ: ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ

141 quintals of ration millet seized Mandya
Published on

ಮಂಡ್ಯ: ತಾಲೂಕಿನ ನೊದೆಕೊಪ್ಪಲು ಗ್ರಾಮದ ಕೋಳಿ ಫಾರ್ಮ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 141 ಕ್ವಿಂಟಾಲ್ ಪಡಿತರ ರಾಗಿ ಚೀಲವನ್ನು ಆಹಾರ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವೇಳೆ 50 ಕೆ.ಜಿ ತೂಕದ 284 ಗೋಣಿ ಚೀಲದಲ್ಲಿ ಸಂಗ್ರಹಿಸಿಟ್ಟಿದ್ದ 141 ಕ್ವಿಂಟಾಲ್ 98 ಕೆ.ಜಿ ರಾಗಿಯನ್ನು ವಶಪಡಿಸಲಾಗಿದೆ. ಇದರ ಅಂದಾಜು ಮೌಲ್ಯ ಎಪಿಎಂಸಿ ದರದಂತೆ ಪ್ರತಿ ಕ್ವಿಂಟಾಲ್‌ಗೆ 3,200 ರೂಗಳಾಗಿದೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net