

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ ಅವಶ್ಯಕತೆಗೆ ಅನುಗುಣವಾಗಿ 14,106 ಅತಿಥಿ ಉಪನ್ಯಾಸಕರ ನೇಮಕಕ್ಕೆ ಇಲಾಖೆ ಅನುಮತಿ ನೀಡಿದೆ.
ಹೊಸ ನೇಮಕದ ಬದಲು ಈ ಹಿಂದೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರಿಂದ ಅರ್ಜಿ ಪಡೆದು ಪ್ರಾಂಶುಪಾಲರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಪರಿಶೀಲಿಸಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. 1,3 , 5ನೇ ಸೆಮಿಸ್ಟರ್ ಅವಧಿಯ ಪದವಿ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿನ ಕಾರ್ಯಭಾರಕ್ಕೆ ಅನುಗುಣವಾಗಿ ಉಪನ್ಯಾಸಕರ ನೇಮಕಕ್ಕೆ ಸೂಚಿಸಲಾಗಿದೆ.
ಮಾನದಂಡಗಳೇನು?: ಅಭ್ಯರ್ಥಿಗಳು 2 ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಶೇ.25 ಗಣನೆಗೆ ತೆಗೆದುಕೊಳ್ಳಲಾಗುವುದು. ಪಿಎಚ್.ಡಿ ವಿದ್ಯಾರ್ಹತೆ, ಎನ್ಇಟಿ/ ಕೆ-ಸೆಟ್, ಎಸ್ಎಲ್ಇಟಿ ವಿದ್ಯಾರ್ಹತೆ, ಎಂ.ಫಿಲ್ ವಿದ್ಯಾರ್ಹತೆ, ಹಿಂದಿನ ವರ್ಷಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವಧಿಗೆ ಪ್ರತಿ ಶೈಕ್ಷಣಿಕ ವರ್ಷಕ್ಕೆ 3 ಅಂಕಗಳಂತೆ ನೀಡಲಾಗುವುದು. ಅಂಗವಿಕಲ ಅಭ್ಯರ್ಥಿಗಳಿಗೆ 10 ಅಂಕಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತದೆ. ಮಾಹಿತಿಗೆ https://bit.ly/3jHlz8e ನೋಡಬಹುದು.