

ರಬಕವಿ/ಬನಹಟ್ಟಿ: ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದ್ದು, ಸೋಮವಾರ ಬೆಳಗ್ಗೆ ಹಿಪ್ಪರಗಿ ಬ್ಯಾರೇಜ್‌ಗೆ 14,250 ಕ್ಯೂಸೆಕ್ ಒಳ ಹರಿವು ಇದ್ದು, ಹೊರ ಹರಿವೂ ಅಷ್ಟೆ ಪ್ರಮಾಣದಲ್ಲಿದೆ ಎಂದು ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ ತಿಳಿಸಿದರು.
ಈ ಜಲಾಶಯ 6 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯವಿರುವ ಬ್ಯಾರೇಜ್‌ನಲ್ಲಿ ಸದ್ಯ 3.66 ಟಿಎಂಸಿ ನೀರಿನ ಸಂಗ್ರಹವಿದೆ. ಮತ್ತು 522.20 ಮೀಟರ್ ನೀರಿನ ಮಟ್ಟವಿದೆ.
5 ಗೇಟ್‌ಗಳಿಂದ ನೀರು ಹೊರಕ್ಕೆ:
22 ಗೇಟ್‌ಗಳನ್ನು ಹೊಂದಿರುವ ಹಿಪ್ಪರಗಿ ಜಲಾಶಯದಲ್ಲಿ ನೀರಿನ ಸಾಮರ್ಥ್ಯ ಹೆಚ್ಚಾಗುತ್ತಿದ್ದು, ಸೋಮವಾರದಿಂದ 5 ಗೇಟ್‌ಗಳ ಮೂಲಕ ನೀರನ್ನು ಹೊರಗಡೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.