ಮೇ 26 ರಂದು ಕಷಿ ವಿವಿಯ 14ನೇ ಘಟಿಕೋತ್ಸವ, 39 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ- ಕುಲಪತಿ ಡಾ.ಹನುಮಂತಪ್ಪ

DR.M.HANUMANTHAPPA
DR.M.HANUMANTHAPPA
Published on

 ರಾಯಚೂರು ರಾಯಚೂರು ಕಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವವನ್ನು ಮೇ 26 ರಂದು ಜರುಗಲಿದ್ದು, ವಿವಿಯಿಂದ ಮೊದಲ ಬಾರಿಗೆ ಕೃಷಿಯಲ್ಲಿ ಸಾಧನೆ ಮಾಡಿದ ಪ್ರಗತಿಪರ ರೈತನಿಗೆ ಗೌರವ ಡಾಕ್ಷರೇಟ್ ಪದವಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ವಿವಿಯ ಕುಲಪತಿ ಡಾ.ಎಂ.ಹನುಮಂತಪ್ಪ ಅವರು ಹೇಳಿದರು.

ನಗರದ ಕೃಷಿ ವಿವಿಯ ಅಂತರಾಷ್ಟ್ರೀಯ ವಸತಿ ಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟಿಕೋತ್ಸವದಲ್ಲಿ ರಾಜ್ಯಪಾಲರ ಥಾವರ್‌ಚಂದ್ ಗೆಹ್ಲೋಟ್ ಅವರು ಭಾಗಿಯಾಗಲಿದ್ದಾರೆ , ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಚಾಲನೆ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಮಹಾಕಾರ್ಯದರ್ಶಿ ಡಾ. ಪಂಕಜ ಮಿತ್ತಲ್ ಸೇರಿ ವಿವಿಯ ವ್ಯವಸ್ಥಾಪನಾ ಮಂಡಳಿಯ ಸದಸ್ಯರುಗಳು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರುಗಳು, ಪದವಿ ಪುರಸ್ಕೃತ ವಿದ್ಯಾರ್ಥಿಗಳು ಮತ್ತು ಪೋಷಕರು, ಗಣ್ಯರು, ಹಿತೈಷಿಗಳು ಹಾಗೂ ವಿಶ್ವವಿದ್ಯಾಲಯದ ಅಧಿಕಾರಿಗಳು ಉಪಸ್ಥಿತರಿರುವರು ಎಂದರು.

39 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿ ಪ್ರದಾನ:

ಕೃಷಿ ವಿವಿಯ 14ನೇ ಘಟಿಕೋತ್ಸವದಲ್ಲಿ 352 ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ, 136 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಹಾಗೂ 39 ವಿದ್ಯಾರ್ಥಿಗಳಿಗೆ ಡಾಕ್ಟರೇಟ್ ಪದವಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಇವರಲ್ಲಿ ವಿದ್ಯಾರ್ಥಿನಿಯರು 152 ಸ್ನಾತಕ ಪದವಿ, 62 ಸ್ನಾತಕೋತ್ತರ ಪದವಿ ಹಾಗೂ 19 ಡಾಕ್ಟರೇಟ್ ಪದವಿಗಳನ್ನು ಹೊಂದುತ್ತಿದ್ದು, ಸ್ನಾತಕ ಪದವಿಯಲ್ಲಿ 27 ಚಿನ್ನದ ಪದಕಗಳನ್ನು ಮತ್ತು 2 ಸ್ನಾತಕ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಸ್ನಾತಕೋತ್ತರ ಪದವಿಯಲ್ಲಿ 17 ಚಿನ್ನದ ಪದಕಗಳನ್ನು ಹಾಗೂ 15 ಚಿನ್ನದ ಪದಕಗಳನ್ನು ಡಾಕ್ಟರೇಟ್ ಪದವಿ ವಿದ್ಯಾರ್ಥಿಗಳಿಗೆ ಗೌರವಾನ್ವಿತ ರಾಜ್ಯಪಾಲರು ಪ್ರದಾನ ಮಾಡಲಿದ್ದಾರೆ.

ಈ ಘಟಿಕೋತ್ಸವದಲ್ಲಿ ಕೃಷಿ ಮತ್ತು ಕೃಷಿಯೇತರ ಚಟುವಟಿಕೆಗಳಲ್ಲಿ ಉತ್ಕೃಷ್ಠ ಸಾಧನೆ ಮಾಡಿದ ಒಬ್ಬ ರೈತರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದರು.

ವಿಶ್ವವಿದ್ಯಾಲಯದ ಪ್ರಾರಂಭದಿಂದ ಇಲ್ಲಿವರೆಗೆ 597 ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲಾಗಿದು,್ದ ಅವುಗಳಲ್ಲಿ 66 ಬೆಳೆ ಉತ್ಪಾದನೆ ಹೆಚ್ಚಿಸುವುದು. 545 ತಂತ್ರಜ್ಞಾನಗಳು ಸಸ್ಯ ಸಂರಕ್ಷಣೆ, ಕೃಷಿ ತಾಂತ್ರಿಕ ಅನ್ವಯಿಕವಾಗಿವೆ. ಮತ್ತು ಎಲ್ಲ ತಂತ್ರಜ್ಞಾನಗಳು ಕಲ್ಯಾಣ ಕರ್ನಾಟಕ ಭಾಗದ ರೈತರ ಶಕ್ತಿ ಮತ್ತು ಸಮಯವನ್ನು ಉಳಿತಾಯ ಮಾಡಿರುವುದಲ್ಲದೆ ಅವರ ಆದಾಯವನ್ನು ದ್ವಿಗುಣಗೊಳಿಸಲು ಸಹಾಯಕವಾಗಿವೆ ಎಂದರು.

ಈ ಸಂದರ್ಭದಲ್ಲಿ ವಿವಿಯ ಕುಲ ಸಚಿವ ಡಾ.ಕೆ.ಆರ್.ದುರುಗೇಶ್, ನಿರ್ಮಮಿತ ಕುಲ ಸಚಿವ ಡಾ.ಗುರುರಾಜ್ ಸುಂಕದ ,ಡಾ.ಅಮರೇಗೌಡ, ಡಾ.ಜಾಗೃತಿ ದೇಶಮಾನೆ, ಡಾ.ಶಿವಶಂಕರ, ಸತೀಶ ಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net