14ರಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

14ರಂದು ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ
Published on

ಹಾಸನ: ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜುಲೈ 14ರ ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಸರ್ಕಾರಿ ನೌಕರರಿಗೆ ಹಾಗೂ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ನೌಕರರಿಗೆ, ವಿಶೇಷವಾಗಿ ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಕೆ.ಎಂ. ಶ್ರೀನಿವಾಸ್ ತಿಳಿಸಿದರು.
ಜಿಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ನಿಗಮ ಮಂಡಳಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ ಮತ್ತು ಹಾಸನ ಜಿಲ್ಲಾ ಸರ್ಕಾರಿ ನೌಕರರ ಕೋ-ಆಪರೇಟಿವ್ ಸೊಸೈಟಿ ನಿ., ಸಹಯೋಗದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಶ್ರೀ ಆದಿಚುಂಚನಗಿರಿ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿಯವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ, ಗೌರವ ಸಮರ್ಪಣೆಯನ್ನು ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ನಡೆಸಿಕೊಡಲಿದ್ದಾರೆ. ಹಾಸನ ಜಿಲ್ಲಾ ಸರ್ಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ತಹಸೀಲ್ದಾರ್ ಸಿ.ಎಸ್. ಪೂರ್ಣಿಮಾ, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತ ಎಚ್.ಎಸ್. ಕರುಣಾಕರ್, ಸಾಧನಾ ಅಕಾಡೆಮಿಯ ಬಿ. ಮಂಜುನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಿವಸ್ವಾಮಿ, ಡಿಡಿಪಿಐ ಎಚ್.ಕೆ. ಪಾಂಡು ಇತರರು ಪಾಲ್ಗೊಳ್ಳಲಿದ್ದಾರೆ. ನಮ್ಮ ಸಂಘದ ಎಲ್ಲಾ ಸದಸ್ಯರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ವಿನಂತಿಸುವುದಾಗಿ ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಹಾಸನ ಜಿಲ್ಲಾ ಸರ್ಕಾರಿ ನೌಕರರ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ.ಎನ್. ಪರಮೇಶ್, ಉಪಾಧ್ಯಕ್ಷ ಬಿ.ಆರ್. ಧರ್ಮ, ಶಿವೇಗೌಡ, ಗೌರವಾಧ್ಯಕ್ಷ ಎಚ್.ಆರ್. ಯಶೋಧರ್, ನಿರ್ದೇಶಕ ಗೋಪಾಲಕೃಷ್ಣ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net