

ಚಿತ್ರದುರ್ಗ: ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರರ (ಕೈವಾರ ತಾತಯ್ಯ) ಜಯಂತಿಯನ್ನು ಮಾ.14ರಂದು ಬೆಳಗ್ಗೆ 11ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಸಂಸದ ಗೋವಿಂದ ಎಂ.ಕಾರಜೋಳ, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗ, ನಗರಸಭೆ ಅಧ್ಯಕ್ಷರು ಮುಖ್ಯಅತಿಥಿಗಳಾಗಿ ಆಗಮಿಸುವರು.
ಜಿಲ್ಲಾ ಶ್ರೀ ಯೋಗಿ ನಾರೇಯಣ ಯತೀಂದ್ರ ಬಲಿಜ ಸಂಘದ ಅಧ್ಯಕ್ಷ ಎಂ.ಎ.ಸೇತುರಾಮ್, ಕಾರ‌್ಯದರ್ಶಿ ಎಂ.ಗಂಗಣ್ಣ, ತಾಲೂಕು ಅಧ್ಯಕ್ಷ ಎಂ.ಜಿ. ಸೂರ್ಯನಾರಾಯಣ, ಶ್ರೀ ಯೋಗಿ ನಾರೇಯಣ ಸೌಹಾರ್ದ ಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಕೆ.ಪ್ರಹ್ಲಾದ್, ಬೊಮ್ಮೇನಹಳ್ಳಿ ಶ್ರೀ ಯೋಗಿ ನಾರೇಯಣ ಯತೀಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ವಿ.ರಾಮದಾಸಪ್ಪ, ಶ್ರೀ ಯೋಗಿ ನಾರೇಯಣ ಯತೀಂದ್ರ ಬಲಿಜ ಸಂಘದ ಅಧ್ಯಕ್ಷ ವಿರೂಪಾಕ್ಷಪ್ಪ ಭಾಗವಹಿಸುವರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕಾರ‌್ಯದರ್ಶಿ ಹುರುಳಿ ಎಂ.ಬಸವರಾಜ್ ಉಪನ್ಯಾಸ ನೀಡುವರು. ಚಳ್ಳಕೆರೆ ಮುತ್ತುರಾಜ್ ತಂಡದವರು ಗೀತಗಾಯನ ನಡೆಸಿಕೊಡುವರು. ಅಂದು ಬೆಳಗ್ಗೆ 9ಕ್ಕೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ರಂಗಮಂದಿರದವರೆಗೆ ಮೆರವಣಿಗೆ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ. ಗುರುನಾಥ ತಿಳಿಸಿದ್ದಾರೆ.
--------