

ಚಿತ್ರದುರ್ಗ: ನಗರ ಕೇಂದ್ರ ಗ್ರಂಥಾಲಯದಲ್ಲಿ ನ.14ರಿಂದ 20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಗುತ್ತಿದ್ದು, ಇ ದರ ಅಂಗವಾಗಿ 11ರಂದು ನಗರ ವ್ಯಾಪ್ತಿಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆ ಆಯೋಜಿಸಲಾಗಿದೆ. ಪ್ರತಿ ಶಾಲಾ ಹಾಗೂ ಕಾಲೇಜುಗಳಿಂದ ಇಬ್ಬರು ವಿದ್ಯಾರ್ಥಿಗಳು 8ರೊಳಗೆ ಗ್ರಂಥಾಲಯ ಕಚೇರಿಗೆ ಹೆಸರು ಸಲ್ಲಿಸಬೇಕು.
11ರಂದು ಬೆಳಗ್ಗೆ 11ರಿಂದ 12 ಗಂಟೆಯವರೆಗೆ ಕಲ್ಲಿನ ಕೋಟೆ ಕುರಿತು ಸ್ಥಳದಲ್ಲೆ ಚಿತ್ರ ಬರೆಯುವ ಸ್ಪರ್ಧೆಯನ್ನು ಪ್ರಾಥಮಿಕ ಮತ್ತು ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದೆ. ಅಂದು ಮಧ್ಯಾಹ್ನ 3ರಿಂದ 4 ರವರಗೆ ಪ್ರೌಢಶಾಲಾ ವಿದ್ಯಾರ್ಥಿ ಗಳಿಗೆ ಗ್ರಂಥಾಲಯದ ಮಹತ್ವ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ. ಅಂದು ಸಂಜೆ 4ರಿಂದ 5ರವರೆಗೆ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ತರಾಸು ಜೀವನ ಚರಿತ್ರೆ ಕುರಿತು ಪ್ರಬಂಧ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.