15.50 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ

15.50 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ
Published on

ಅರಕಲಗೂಡು: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಶಾಸಕ ಎ.ಟಿ. ರಾಮಸ್ವಾಮಿ ಹೇಳಿದರು.

ತಾಲೂಕಿನ ಸಂತೆಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶನಿವಾರ 15.50 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಕ್ಷೇತ್ರಗಳಲ್ಲಿಯೂ ನೈತಿಕ ಮೌಲ್ಯಗಳು ಕುಸಿಯುತ್ತಿದೆ. ಮಕ್ಕಳಲ್ಲಿ ಉನ್ನತ ಮೌಲ್ಯಗಳನ್ನು ಬಿತ್ತುವ ಮೂಲಕ ಹಾದಿ ತಪ್ಪುತ್ತಿರುವ ಸಮಾಜವನ್ನು ಸರಿದಾರಿಗೆ ತರಲು ಪ್ರಯತ್ನಿಸಬೇಕಿದೆ ಎಂದರು.

ನಾನು ಸಾರ್ವಜನಿಕ ಜೀವನದಲ್ಲಿದ್ದು ಸುಳ್ಳು ಮೋಸ, ವಂಚನೆಯಿಂದ ನಡೆದುಕೊಂಡಿಲ್ಲ, ಗಿಮಿಕ್ ನನ್ನ ಜೀವನದಲ್ಲಿ ಮಾಡೇ ಇಲ್ಲ, ರಾಜಕೀಯ ರಂಗ ಕಲುಷಿತವಾಗಿರುವ ಇಂದಿನ ದಿನಗಳಲ್ಲಿಯೂ ಪ್ರಾಮಾಣಿಕತೆಯ ದಾರಿಯನ್ನು ಬಿಡದೆ, ಅಧರ್ಮ ಅಸತ್ಯ ಅನ್ಯಾಯಕ್ಕೆ ಎಡೆ ಮಾಡಿಕೊಟ್ಟಿಲ್ಲವೆಂಬ ಆತ್ಮವಿಶ್ವಾಸ ನನಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೇವರಾಜ್, ಸಿ.ಆರ್.ಸಿ. ಬಾಲರಾಜ್, ಅಕ್ಷರ ದಾಸೋಹ ಅಧಿಕಾರಿ ಶಿವಕುಮಾರ್, ಗ್ರಾಪಂ ಅಧ್ಯಕ್ಷೆ ಮಣಿ ಸ್ವಾಮಿಗೌಡ, ಉಪಾಧ್ಯಕ್ಷ ಸೋಮಶೇಖರ್, ಸದಸ್ಯರಾದ ಲಕ್ಷಮ್ಮ ಈರಯ್ಯ , ಪಿಡಿಒ ರಾಜೇಗೌಡ, ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net