ಪ್ರವಾಸಿ ಬಸ್ ಉರುಳಿ ಬಿದ್ದು 15 ಜನರಿಗೆ ಗಾಯ

9kmd-3
Published on

ಕೆ.ಎಂ.ದೊಡ್ಡಿ: ಅಧ್ಯಯನ ಪ್ರವಾಸಕ್ಕೆ ತೆರಳುತ್ತಿದ್ದ ರೇಷ್ಮೆ ಇಲಾಖೆಯ ಬಸ್ ಮಡೇನಹಳ್ಳಿ ಗೇಟ್ ಬಳಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಪರಿಣಾಮ 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಶ್ರೀರಂಗಪಟ್ಟಣದ ರೇಷ್ಮೆ ಇಲಾಖೆ ವತಿಯಿಂದ ಖಾಸಗಿ ಬಸ್‌ನಲ್ಲಿ ರೇಷ್ಮೆ ಬೆಳೆಗಾರರು ಹಲಗೂರು ಹೋಬಳಿಗೆ ಅಧ್ಯಯನ ಪ್ರವಾಸಕ್ಕೆ ತೆರಳುತಿದ್ದರು. ಈ ವೇಳೆ ಚಾಲಕನ ಅಜಾಗರೂಕತೆಯ ಚಾಲನೆಯಿಂದ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.
ಪರಿಣಾಮ ಶ್ರೀರಂಗಪಟ್ಟಣದ ಹರ್ಷಿತ್, ಗೋಪಾಲ್,ನಾಗೇಂದ್ರ, ಜಯರಾಮು, ಚಿಕ್ಕಹಾರೋಹಳ್ಳಿ ಗ್ರಾಮದ ಪ್ರಕಾಶ್, ನವೀನ್, ಶಿವರಾಜು, ನೇರಳಕೆರೆ ಮಂಜ, ಪುಟ್ಟಸ್ವಾಮಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಅವರನ್ನು ರವಾನಿಸಲಾಗಿದೆ.

ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net