15 ರಂದು ರೈತರಿಂದ ಮೌನ ಪ್ರತಿಭಟನೆ

11 NMG 01 (2)
Published on

ನಾಗಮಂಗಲ: ಕೊಬ್ಬರಿ ಬೆಲೆ ಇಳಿಕೆಯಾಗಿರುವುದರಿಂದ ಹೆಚ್ಚಿನ ಬೆಂಬಲ ಬೆಲೆ ನಿಗದಿಗೊಳಿಸುವಂತೆ ಒತ್ತಾಯಿಸಿ ಜು.15 ರಂದು ತಾಲೂಕಿನ ಕದಬಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ರೈತಮುಖಂಡ ರಾಮಸ್ವಾಮಿಗೌಡ ತಿಳಿಸಿದರು.
ಹಳೇ ಮೈಸೂರು ಭಾಗದ ಜತೆಗೆ ದಕ್ಷಿಣ ಕರ್ನಾಟಕದಲ್ಲಿ ತೆಂಗು ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದು ತೆಂಗಿನಕಾಯಿಗೆ ಬೆಲೆ ಇಲ್ಲದಂತಾಗಿ ರೈತರು ಬೀದಿಗೆ ಬರುವಂತಾಗಿದೆ. ಕೊಬ್ಬರಿಗೆ ನಿಖರ ಬೆಲೆ ಸಿಗದಿರುವುದರಿಂದ ರೈತರು ಆತ್ಮಹತ್ಯೆಗೆ ಮುಂದಾಗುವಂತಾಗಿದೆ. ಕೇಂದ್ರ ಸರ್ಕಾರದ ಹಲವಾರು ನ್ಯೂನತೆಗಳಿಂದ ರೈತರು ಅನೇಕ ಕಷ್ಟ ಅನುಭವಿಸುವಂತಾಗಿದೆ. ಚೆನ್ನಾಗಿರುವ ಕೊಬ್ಬರಿಗಳನ್ನು ಮಾತ್ರ ಕೊಂಡುಕೊಳ್ಳಲಾಗುತ್ತಿದ್ದು ಉಳಿದವುಗಳನ್ನು ರೈತರು ತಿಪ್ಪೆಗೆ ಸುರಿಯುವಂತಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅಳಲು ತೋಡಿಕೊಂಡರು.
ಕ್ವಿಂಟಾಲ್‌ಗೆ 25 ಸಾವಿರ ರೂ. ಬೆಂಬಲ ಬೆಲೆಯನ್ನು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಜು.15 ರಂದು ಬೆಳಿಗ್ಗೆ 10 ಗಂಟೆಗೆ ಬೃಹತ್ ಮೌನ ಪ್ರತಿಭಟನಾ ಮೆರವಣಿಗೆಯನ್ನು ಕದಬಹಳ್ಳಿಯಲ್ಲಿ ನಡೆಸಲಾಗುತ್ತಿದೆ. ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ರೈತ ಮುಖಂಡರಾದ ರಂಗೇಗೌಡ, ಸುರೇಶ್, ಸತೀಶ್, ಯದುರಾಜು, ಗೋಪಾಲಕೃಷ್ಣ ಹಾಗೂ ನಾಗೇಶ್ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net