150 ಕೆ.ಜಿ. ಟೊಮ್ಯಾಟೊ ಕದ್ದ ಕಳ್ಳರು

Tomato Crop
Published on

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಟೊಮ್ಯಾಟೊವನ್ನು ಕಳ್ಳರು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಗ್ರಾಮದ ವಿಜಯ್ ಎಂಬುವರ ಜಮೀನಿನಲ್ಲಿ ಟೊಮ್ಯಾಟೊ ಬೆಳೆದಿದ್ದರು. ಕಳೆದ ಎರಡು ದಿನಗಳಿಂದ ಅವರು ಜಮೀನಿನ ಕಡೆ ಹೋಗಿರಲಿಲ್ಲ. ಟೊಮ್ಯಾಟೊಗೆ ಉತ್ತಮ ಬೆಲೆ ಬಂದಿರುವುದರಿಂದ ಕಳ್ಳರು ಸುಮಾರು 150 ಕೆ.ಜಿ.ಯಷ್ಟು ಟೊಮ್ಯಾಟೊವನ್ನು ಕದ್ದು ಪರಾರಿಯಾಗಿದ್ದಾರೆ. ಈ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net