15,724 ಮೃತ ಗೃಹಲಕ್ಷ್ಮೀ ಲಾನುಭವಿಗಳು ಡಿಲೀಟ್

* ಮರಣದ ಬಳಿಕವೂ ಖಾತೆಗೆ ಜಮೆಯಾಗಿದ್ದ ಹಣ * ಒಟ್ಟು 79.86 ಲಕ್ಷ ರೂ.ಸರ್ಕಾರಕ್ಕೆ ವಾಪಸ್
 ಮೈಸೂರು ನಗರದ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಸ್.ಅರುಣ್ ಕುಮಾರ್, ಪ್ರೊ. ಶಿವಕುಮಾರ್, ಹುಣಸೂರು ಬಸವಣ್ಣ,  ಸವಿತಾ ಹಾಗೂ ಇತರರು ಇದ್ದರು.
ಮೈಸೂರು ನಗರದ ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಮಂಗಳವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಎಸ್.ಅರುಣ್ ಕುಮಾರ್, ಪ್ರೊ. ಶಿವಕುಮಾರ್, ಹುಣಸೂರು ಬಸವಣ್ಣ, ಸವಿತಾ ಹಾಗೂ ಇತರರು ಇದ್ದರು.
Published on

ಮೈಸೂರು: ಜಿಲ್ಲೆಯಲ್ಲಿ ಮರಣ ಹೊಂದಿರುವ 15,724 ಗೃಹಲಕ್ಷ್ಮಿ ಜನೆಯ ಲಾನುಭವಿಗಳನ್ನು ಯೋಜನೆಯಿಂದ ಕೈಬಿಡಲಾಗಿದ್ದು, ಅವರ ಮರಣದ ನಂತರವೂ ಖಾತೆಗಳಿಗೆ ಜಮೆಯಾಗಿದ್ದ ಒಟ್ಟು 79,86,760 ರೂ.ಗಳನ್ನು ಹಿಂಪಡೆದು ಸರ್ಕಾರದ ಖಾತೆಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಎಸ್.ಅರುಣ್ ಕುಮಾರ್ ಹೇಳಿದರು.

ಜಿಲ್ಲಾ ಪಂಚಾಯಿತಿಯ ಡಿ.ದೇವರಾಜ ಅರಸು ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಾಕಿ ಇರುವ ಪ್ರಕರಣಗಳಲ್ಲಿ ಲಾನುಭವಿಗಳ ಮರಣದ ನಂತರ ಖಾತೆಗೆ ಜಮೆಯಾಗಿರುವ ಹಣವನ್ನು ಪತ್ತೆಹಚ್ಚಿ ಹಿಂಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಕಾರಿಗಳಿಗೆ ಸೂಚಿಸಿದರು.

ಮನೆಗೆ ತೆರಳಿ ಮರುಪರಿಶೀಲನೆ:

ಗೃಹಲಕ್ಷ್ಮೀ ಯೋಜನೆಯಲ್ಲಿ ಅರ್ಹ ಲಾನುಭವಿಗಳನ್ನು ಮುಂದುವರಿಸಿ, ಅನರ್ಹರನ್ನು ಯೋಜನೆಯಿಂದ ಕೈಬಿಡುವ ಉದ್ದೇಶದಿಂದ ಮರುಪರಿಶೀಲನಾ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರತಿಯೊಂದು ಮನೆಗೂ ಭೇಟಿ ನೀಡಿ ನಿಖರ ಮಾಹಿತಿಯನ್ನು ಸಂಗ್ರಹಿಸುವಂತೆ ಅಕಾರಿಗಳಿಗೆ ಸೂಚಿಸಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷ ಹುಣಸೂರು ಬಸವಣ್ಣ ಮಾತನಾಡಿ, ಮರುಪರಿಶೀಲನಾ ಕಾರ್ಯಕ್ಕೆ ಸಂಬಂಸಿದಂತೆ ತಾಲೂಕು ಮಟ್ಟದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗಣತಿದಾರರಿಗೆ ತರಬೇತಿ ನೀಡಲಾಗುತ್ತಿದೆ. ಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆಗೆ ಅಗತ್ಯ ದಾಖಲೆಗಳನ್ನು ಒದಗಿಸುವಂತೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜು ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಮರುಪರಿಶೀಲನೆಗೆ ಪ್ರತಿ 250 ಲಾನುಭವಿಗಳಿಗೆ ಒಬ್ಬ ಗಣತಿದಾರರನ್ನು ನೇಮಕ ಮಾಡಲಾಗುವುದು. ಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸಿರುವುದು ಹಾಗೂ ಕರ್ನಾಟಕ ರಾಜ್ಯದಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರುವುದು ಸೇರಿದಂತೆ ಸರ್ಕಾರ ನಿಗದಿಪಡಿಸಿರುವ ಇತರೆ ಅರ್ಹತಾ ಮಾನದಂಡಗಳನ್ನು ಸಭೆಗೆ ವಿವರಿಸಿದರು.

ಸಮಿತಿ ಸದಸ್ಯ ಸಾ.ಮಾ. ಯೋಗೇಶ್ ಮಾತನಾಡಿ, ಕೆಲವು ಕಾರಣಗಳಿಂದ ಎಚ್.ಡಿ.ಕೋಟೆ ತಾಲೂಕಿನ ಸಾಗರೆ ಗ್ರಾಮದ ಅರ್ಹ ಲಾನುಭವಿ ದೇವಮ್ಮ ಅವರಿಗೆ ಜಿಲ್ಲಾ ಗ್ಯಾರಂಟಿ ಯೋಜನೆ ಸಮಿತಿ ಉಪಾಧ್ಯಕ್ಷ ಹುಣಸೂರು ಬಸವಣ್ಣ ಯೋಜನೆಯ ಹಣ ದೊರಕಿರಲಿಲ್ಲ. ಈ ಕುರಿತು ಗ್ಯಾರಂಟಿ ಯೋಜನೆಗಳ ಸಭೆಯಲ್ಲಿ ಚರ್ಚಿಸಿ ಅಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಲಾಗಿತ್ತು. ಅದರಂತೆ ಅಕಾರಿಗಳು ಕ್ರಮವಹಿಸಿ ಅವರಿಗೆ ಯೋಜನೆಯ ಹಣ ದೊರಕುವಂತೆ ಮಾಡಿದ್ದಾರೆ ಎಂದು ತಿಳಿಸಿದರು.

ಅರ್ಹ ಲಾನುಭವಿಗಳಿಗೆ ಯೋಜನೆಯ ಸೌಲಭ್ಯ ದೊರಕುವಂತೆ ಮಾಡುವುದರ ಜತೆಗೆ, ಅನರ್ಹರು ಅಥವಾ ಮೃತ ಲಾನುಭವಿಗಳ ಹೆಸರಿನಲ್ಲಿ ಸೌಲಭ್ಯ ಮುಂದುವರಿಯದಂತೆ ಪರಿಶೀಲನೆ ನಡೆಸುವುದು ಅಗತ್ಯ ಎಂದರು.

ಗೃಹಜ್ಯೋತಿ ಯೋಜನೆಯ ಮರುಸಮೀಕ್ಷೆಯನ್ನು ನಿಗದಿತ ಅವಯಲ್ಲಿ ಪೂರ್ಣಗೊಳಿಸಲು ಹೆಚ್ಚಿನ ನಿಗಾ ವಹಿಸುವಂತೆ ಅಕಾರಿಗಳಿಗೆ ಸೂಚಿಸಲಾಯಿತು. ಅೀಕ್ಷಕ ಎಂಜಿನಿಯರ್‌ಗಳು ತಮ್ಮ ಅೀನದ ಅಕಾರಿಗಳೊಂದಿಗೆ ಸಭೆ ನಡೆಸಿ, ಮರುಸಮೀಕ್ಷಾ ಕಾರ್ಯದ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ನಿರ್ದೇಶನ ನೀಡಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.

ಇತರೆ ಯೋಜನೆಗಳೂ ಜನರಿಗೆ ತಲುಪಲಿ:

ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಪ್ರೊ. ಶಿವಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಮಾದರಿಯಲ್ಲಿ ಸರ್ಕಾರದ ಇತರೆ ಯೋಜನೆಗಳೂ ಅರ್ಹ ಸಾರ್ವಜನಿಕರಿಗೆ ತಲುಪುವಂತೆ ಅಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾ ಮುಖ್ಯ ಯೋಜನಾಕಾರಿ ಸವಿತಾ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಹೆಚ್ಚಿನ ಸಂಖ್ಯೆಯ ಜನರಿಗೆ ತಲುಪುವಂತೆ ಸಂಬಂಧಪಟ್ಟ ಇಲಾಖೆಗಳು ಕಾರ್ಯನಿರ್ವಹಿಸಬೇಕು. ಯೋಜನೆಗಳಿಂದ ಪ್ರಯೋಜನ ಪಡೆದ ಲಾನುಭವಿಗಳ ಯಶೋಗಾಥೆಗಳನ್ನು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ತಲುಪಿಸುವಂತೆ ಇಲಾಖಾ ಅಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರಾದ ಅಬ್ದುಲ್ ಖಾದರ್, ಚಲುವರಾಜು, ಚಾಮರಾಜು, ಲಲಿತಾ, ಉತ್ತನಳ್ಳಿ ಶಿವಣ್ಣ ಸೇರಿದಂತೆ ವಿವಿಧ ಇಲಾಖೆಗಳ ಅಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net