15ರಂದು ಕವಿಗೋಷ್ಠಿ ಕಾರ್ಯಕ್ರಮ

628fdf37-70c5-49cc-93e9-78428ff427be
Published on

ಮೈಸೂರು: ಅಭಿರುಚಿ ಬಳಗ, ಆಸಕ್ತಿ ಪ್ರಕಾಶನ, ಎನ್.ವಿ.ರಮೇಶ್ ಕಲಾ ಬಳಗ ಹಾಗೂ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಕವಿಗೋಷ್ಠಿ ಹಾಗೂ ಅನುಭವ ಹಂಚಿಕೆ ಕಾರ್ಯಕ್ರಮ ಅ.15ರಂದು ಮಧ್ಯಾಹ್ನ 2ಕ್ಕೆ ಕೃಷ್ಣಮೂರ್ತಿಪುರಂನ ನಯನ ಕಲಾಮಂಟಪದಲ್ಲಿ ಆಯೋಜಿಸಲಾಗಿದೆ.


ಬೊಮ್ಮನಹಳ್ಳಿಯ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿದ್ವಾನ್ ಡಾ.ಎಂ. ಖಾಸೀ ಮಲ್ಲಿಗೆ ಮಡುವು, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಸಂಘಟನಾ ಕಾರ್ಯದರ್ಶಿ ವೀರನಗೌಡ ಮರೀಗೌಡ ಪಾಲ್ಗೊಳ್ಳುವರು. ಮಧ್ಯಾಹ್ನ 3.30 ಗಂಟೆಗೆ ಕವಿಗೋಷ್ಠಿ ಹಾಗೂ ಅನುಭವ ಹಂಚಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಬಳಗದ ಅಧ್ಯಕ್ಷ ಎನ್.ವಿ.ರಮೇಶ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net