15ರಂದು ಪೇಜಾವರ ಶ್ರೀಗಳ ಅಭಿನಂದನಾ ಸಮಾರಂಭ

ctd ----00003
Published on

ಚಿತ್ರದುರ್ಗ: ಚಿತ್ರದುರ್ಗದ ಶ್ರೀ ಗುರುರಾಜ ಸೇವಾ ಸಂಘದಿಂದ ಡಿ.15ರಂದು ಸಂಜೆ 6ಕ್ಕೆ ನಗರದ ಶ್ರೀ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಉಡುಪಿ ಶ್ರೀಪೇಜಾವರ ಮಠದ ಪೀಠಾಧಿಪತಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ಗುರುವಂದನೆ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 8ರಿಂದ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಕಲಶ ಸ್ಥಾಪನೆ, ಸಂಕಲ್ಪ, ಪವಮಾನ ಹೋಮ ಮತ್ತು ಧನ್ವಂತರಿ ಹೋಮ, ಪೂರ್ಣಾಹುತಿ, ಸಂಸ್ಥಾನ ಪೂಜೆ, ಮಹಾಮಂಗಳಾರತಿ ಹಾಗೂ ವೈಶ್ವಾನರ ಯಜ್ಞ ನಡೆಯಲಿದೆ. ಸಂಜೆ 5.30ಕ್ಕೆ ಆನೆಬಾಗಿಲಿನಿಂದ ಗಾಯತ್ರಿ ಕಲ್ಯಾಣ ಮಂಟಪದವರೆಗೆ ಪೇಜಾವರ ಶ್ರೀಗಳ ಶೋಭಾಯಾತ್ರೆ ಜರುಗಲಿದೆ.

ನಂತರ ಶ್ರೀಗಳ ಸಾನ್ನಿಧ್ಯದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸಂಸದ ಗೋವಿಂದ ಎಂ. ಕಾರಜೋಳ, ಶಾಸಕ ಕೆ.ಸಿ. ವೀರೇಂದ್ರಪಪ್ಪಿ, ಎಂಎಲ್‌ಸಿ ಕೆ.ಎಸ್. ನವೀನ್, ಮಾಜಿ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ, ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್. ಮಂಜುನಾಥ್ ಮತ್ತಿತರ ಗಣ್ಯರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net