15ರಂದು ಬೆಂಗಳೂರಿಗೆ ಪಾದಯಾತ್ರೆ

Published on

ಅರಸೀಕೆರೆ: ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 20 ಸಾವಿರ ರೂ. ಬೆಂಬಲ ಬೆಲೆ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆ.15ರಂದು ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನ ಕುಮಾರ್ ತಿಳಿಸಿದರು.


ಅಂದು ಕಸ್ತೂರ ಬಾ ಶಿಬಿರಕ್ಕೆ ಭೇಟಿ ನೀಡಿ ಮಹಾತ್ಮ ಗಾಂಧಿ ಚಿತಾಭಸ್ಮಕ್ಕೆ ನಮನ ಸಲ್ಲಿಸಿದ ಬಳಿಕ ಬಸವೇಶ್ವರ ವೃತ್ತದಲ್ಲಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿ ಪಾದಯಾತ್ರೆಗೆ ಚಾಲನೆ ನೀಡಲಾಗುವುದು. ಆ.23ರಂದು ವಿಧಾನಸೌಧಕ್ಕೆ ತೆರಳಿ ತೆಂಗು ಬೆಳೆಗಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ರೈತ ಮುಖಂಡರಾದ ಅಯೂಬ್ ಪಾಷಾ, ಎಜಾಜ್ ಪಾಷಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net