

ಮೈಸೂರು: ನಗರ ಪೊಲೀಸರು ತಪಾಸಣಾ ಕಾರ್ಯದ ವೇಳೆ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 16 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ನಗರದಲ್ಲಿ ಈಗಾಗಲೇ 14 ಕಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ತಪಾಸಣೆ ನಡೆಸುತ್ತಿರುವ ಪೊಲೀಸರು, ಬುಧವಾರ ರಾತ್ರಿ ನಡೆಸಿದ ದಿಢೀರ್ ಕಾರ್ಯಾಚರಣೆಯಲ್ಲಿ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ನಗರ ವ್ಯಾಪ್ತಿಯಲ್ಲಿ, ವಿವಿಧ ಜಂಕ್ಷನ್‌ಗಳು ಸೇರಿದಂತೆ, ವಿವಿಧ ಸ್ಥಳಗಳಲ್ಲಿ ತಪಾಸಣೆ ನಡೆಸಿದ ನಗರ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ನಗದನ್ನು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡ(ಎ್ಎಸ್‌ಟಿ) ಮತ್ತು ಸ್ಟ್ಯಾಟಿಕ್ ಸರ್ವೆಲೆನ್ಸ್ ಟೀಮ್ (ಎಸ್‌ಎಸ್‌ಟಿ) ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ.