

ಬೆಂಗಳೂರು: ರಾಜ್ಯದಲ್ಲಿ ಗುರುವಾರ 494 ಡೆಂಘೆ ಹೊಸ ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,319 ತಲುಪಿದೆ. ಇದರೊಂದಿಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 16 ಸಾವಿರ ಗಡಿ ದಾಟಿದೆ.
ಕಳೆದ 24 ಗಂಟೆಗಳಲ್ಲಿ 3,083 ಡೆಂಘೆ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಬೆಂಗಳೂರಿನಲ್ಲಿ 285, ಹಾಸನ 30, ದಾವಣಗೆರೆ 21, ಕಲಬುರಗಿ 17 ಸೇರಿ 494 ಮಂದಿ ಡೆಂಘೆಯಿಂದ ಬಳಲುತ್ತಿದ್ದಾರೆ. ಸೋಂಕಿತರಲ್ಲಿ 2,655 ಮಂದಿ ಮನೆ ಆರೈಕೆಯಲ್ಲಿದ್ದಾರೆ. 641 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, 13 ಮಂದಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.