

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಂತೋಷದ ಸುದ್ದಿ. ಅದೂ ರಾಜಧಾನಿ ಬೆಂಗಳೂರಿನಲ್ಲಿ ಕೆಲಸ ಮಾಡಬಯಸುವವರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲೇ ಒಂದಷ್ಟು ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗಾಗಿ ಇದೀಗ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿನ 16 ತಾಂತ್ರಿಕ ಹುದ್ದೆಗಳನ್ನು ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ 8 ಹುದ್ದೆ, ಮತ್ತು ಡಿಜಿಟಲ್ ಫೊರೆನ್ಸಿಕ್ ಅನಾಲಿಸ್ಟ್ 8 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಡಿ. 20ರ ಬೆಳಗ್ಗೆ 10 ಗಂಟೆಯಿಂದ ಜ.21ರ ಸಂಜೆ 6 ಗಂಟೆ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗಳಾದ http://ksp.karnataka.gov.in ಮತ್ತು http://www.bcp.gov.in ಗಳಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಅಲ್ಲಿಂದ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಮತ್ತು ಇ-ಮೇಲ್ ವಿಳಾಸ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.