16 ವರ್ಷದ ಹಳೇ ಪ್ರಕರಣ ಆರೋಪಿ ಬಂಧನ

arrested
Published on

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 16 ವರ್ಷಗಳ ಹಳೇ ಪ್ರಕರಣದ ಆರೋಪಿಯನ್ನು
ಮಂಗಳೂರು ಕರಾವಳಿ ಕಾವಲು ಪೊಲೀಸರು ಬಂಧಿಸಿದ್ದಾರೆ.


ಬೆಳ್ತಂಗಡಿ ತೋಟತ್ತಡಿಯ ಟಿ.ಇ. ಜೋಸ್ೆ (58) ಬಂಧಿತ. ಈತ ಮಾದಕ ದ್ರವ್ಯ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣದಲ್ಲಿ ಆರೋಪಿಯಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕೇರಳ ರಾಜ್ಯದ ವಿವಿಧ ಠಾಣೆಗಳಲ್ಲಿ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು,ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು .


ಫೆ.22ರಂದು ಕೇರಳ ತ್ರಿಶೂರ್‌ನಲ್ಲಿ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ. ಮಂಗಳೂರು ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರ ಮಾರ್ಗದರ್ಶನದಲ್ಲಿ ಎಎಸ್‌ಐ ಆಶೋಕ್, ಹೆಡ್‌ಕಾನ್‌ಸ್ಟೆಬಲ್‌ಗಳಾದ ವಿಜಯ ಸುವರ್ಣ, ಲೋಕೇಶ್ ಹಾಗೂ ಸಿಬಂದಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net