ಸವಲತ್ತು ಬಳಸಿಕೊಂಡು ಮುಖ್ಯವಾಹಿನಿಗೆ ಬನ್ನಿ

04M.D.R.5
Published on

ಮದ್ದೂರು: ಅಂಗವಿಕಲರ ಆರ್ಥಿಕ, ಸಾಮಾಜಿಕ ಪ್ರಗತಿಗಾಗಿ ಸರ್ಕಾರಗಳು ಹಲವು ಯೋಜನೆಗಳನ್ನು ರೂಪಿಸಿವೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು.


ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ಸರ್ಕಾರದ ವತಿಯಿಂದ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ಸ್ಕೂಟರ್ ವಿತರಿಸಿ ಮಾತನಾಡಿದರು. ತಾಲೂಕಿನಲ್ಲಿ 3600ಕ್ಕೂ ಹೆಚ್ಚು ಮಂದಿ ಅಂಗವಿಕಲರಿದ್ದಾರೆ. ಮುಂದಿನ ದಿನಗಳಲ್ಲಿ ಅವರ ಕುಂದು ಕೊರತೆಗಳನ್ನು ಆಲಿಸಲು ಪ್ರತ್ಯೇಕ ಸಭೆಗಳನ್ನು ಮಾಡಲಾಗುವುದು ಹಾಗೂ ನನ್ನ ಅನುದಾನದಲ್ಲಿ ಅಂಗವಿಕಲರಿಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳುತ್ತೇನೆ. ಅಂಗವಿಕಲರು ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಸರ್ಕಾರದ ಭಾಗವಾಗಿ ನಾವು ಏನೆಲ್ಲ ಮಾಡಬೇಕೋ ಆ ಎಲ್ಲ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗುವುದು ಎಂದು ಭರವಸೆ ವ್ಯಕ್ತಪಡಿಸಿದರು.


ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರಿಗೆ ವಿಶೇಷ ಆದ್ಯತೆ ನೀಡಿ ಅವರ ಕೆಲಸಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ತಾಲೂಕಿನ ಎಲ್ಲ ಅಧಿಕಾರಿಗಳಿಗೂ ಸೂಚಿಸಿದ್ದೇನೆ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಸೇರಿದಂತೆ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಅಂಗವಿಕಲರ ಮೀಸಲು ಹಣವನ್ನು ಸಮರ್ಪಕವಾಗಿ ಬಳಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡುತ್ತೇನೆ ಎಂದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಲ್.ಸಂದೀಪ್, ಸರ್ವೋದಯ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಸಿ.ರಮೇಶ್, ತಾಲೂಕು ಸಂಯೋಜಕ ಪುಟ್ಟಸ್ವಾಮಿ, ಮುಖಂಡರಾದ ಸಿ.ಕೆ.ಕೃಷ್ಣ, ಬಿ.ಕೆ.ರಾಜಣ್ಣ, ರಾಜು, ಮಹೇಶ್, ಆನಂದ್ ಇತರರಿದ್ದರು.

ಮದ್ದೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಅರ್ಹ ಅಂಗವಿಕಲ ಫಲಾನುಭವಿಗಳಿಗೆ ಶಾಸಕ ಕೆ.ಎಂ.ಉದಯ್ ತ್ರಿಚಕ್ರ ಸ್ಕೂಟರ್‌ಗಳನ್ನು ವಿತರಿಸಿದರು. ಎಲ್.ಸಂದೀಪ್, ಎಸ್.ಸಿ.ರಮೇಶ್, ಪುಟ್ಟಸ್ವಾಮಿ, ಸಿ.ಕೆ.ಕೃಷ್ಣ, ರಾಜಣ್ಣ, ಮಹೇಶ್, ಆನಂದ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net