ಕರೊನಾದಿಂದ 165 ಮಂದಿ ಗುಣಮುಖ ; 4408ಕ್ಕೇರಿದ ಸೋಂಕಿತರ ಸಂಖ್ಯೆ

Corona
Published on

ತುಮಕೂರು: ಜಿಲ್ಲೆಯಲ್ಲಿ ಒಂದೇ ದಿನ ಅತೀ ಹೆಚ್ಚು 165 ಮಂದಿಯಲ್ಲಿ ಕರೊನಾ ಸೋಂಕು ದೃಢಪಟ್ಟಿದೆ. ಮತ್ತೊಂದೆಡೆ 165 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ತುಸು ನೆಮ್ಮದಿ ಮೂಡಿಸಿದೆ.

ಸೋಮವಾರ 165 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 4408ಕ್ಕೇರಿದೆ. ಐವರು ಕರೊನಾಕ್ಕೆ ಬಲಿಯಾಗಿದ್ದು ಜಿಲ್ಲೆಯಲ್ಲಿ ಮೃತರ ಸಂಖ್ಯೆ 139ಕ್ಕೆ ಮುಟ್ಟಿದೆ. ತುಮಕೂರು ತಾಲೂಕಿನಲ್ಲಿ 40 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡರೆ ತಿಪಟೂರಿನಲ್ಲಿ 26 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಣಿಗಲ್, ತುರುವೇಕರೆ ತಾಲೂಕಿನಲ್ಲಿ ತಲಾ 19 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡರೆ ಪಾವಗಡ-15, ಶಿರಾ-11, ಚಿಕ್ಕನಾಯಕನಹಳ್ಳಿ-11, ಮಧುಗಿರಿ-10, ಗುಬ್ಬಿ-10 ಹಾಗೂ ಕೊರಟಗೆರೆಯಲ್ಲಿ 4 ಮಂದಿಗೆ ಸೋಂಕು ತಗುಲಿದೆ.

165 ಮಂದಿ ಗುಣಮುಖ: ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 165 ಮಂದಿ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ ಒಟ್ಟು 3254 ಮಂದಿ ಸೋಂಕು ಮುಕ್ತರಾಗಿ, ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಜಿಲ್ಲೆಯಲ್ಲಿ ಸದ್ಯ 1015 ಸಕ್ರಿಯ ಪ್ರಕರಣಗಳಿದ್ದು 12 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net