16ರಂದು ಬಿವಿಎಸ್ ರಜತ ಮಹೋತ್ಸವ

Published on

ಚಾಮರಾಜನಗರ: ಭಾರತೀಯ ವಿದ್ಯಾರ್ಥಿ ಸಂಘ (ಬಿವಿಎಸ್) ರಜತ ಮಹೋತ್ಸವ ಹಾಗೂ ವಿದ್ಯಾರ್ಥಿಗಳ ಉನ್ನತ ಶಿಕ್ಷಣ, ಉದ್ಯೋಗ, ಉದ್ಯಮ ಹಾಗೂ ಜಾಗತಿಕ ಬೆಳವಣಿಗೆಗಾಗಿ ೆ.16 ರಂದು ಸಂಕಲ್ಪ ಸಮಾವೇಶವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ.

ಬೆಂಗಳೂರಿನ ಸುಮನಹಳ್ಳಿಯ ಡಾ.ಬಾಬು ಜಗಜೀವನರಾಂ ಭವನದಲ್ಲಿ ನಡೆಯುವ ಸಮಾವೇಶದಲ್ಲಿ ತಿ.ನರಸೀಪುರ ನಳಂದ ಬುದ್ಧ ವಿಹಾರದ ಬೋಧಿರತ್ನ ಬಂತೇಜಿ ಸಾನಿಧ್ಯವಹಿಸುವರು. ಕೇಂದ್ರ ಆದಾಯ ತೆರಿಗೆ ಇಲಾಖೆಯ ಆಯುಕ್ತ ಎಂ.ಎಸ್.ನೇತ್ರಾಪಾಲ್ ಉದ್ಘಾಟಿಸುವರು. ಕವಿಗಳಾದ ಅರವಿಂದ ಮಾಲಗತ್ತಿ ಬಿವಿಎಸ್ 25 ವರ್ಷಗಳ ಮೆಲುಕು ಹಾಕಲಿದ್ದಾರೆ. ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಮೊವಳ್ಳಿ ಶಂಕರ್ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಇನ್ನಿತರೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡಬೇಕು ಎಂದು ಜಿಲ್ಲಾ ಸಂಯೋಜಕ ಪರ್ವತ್‌ರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net