

ಉಡುಪಿ : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ಮಲ್ಪೆ ಬಂದರಿನಲ್ಲಿ ಮೀನು ಆಯುತ್ತಿದ್ದ 17 ಮಂದಿ ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ .ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ , ಪೊಲೀಸ್ ಇಲಾಖೆ .ಮಕ್ಕಳ ಸಹಾಯವಾಣಿ .ನಾಗರಿಕ ಸೇವಾ ಟ್ರಸ್ಟ್ ಉಡುಪಿ ವತಿಯಿಂದ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್ , ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ , ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ. ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್ , ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್ ಭಾಗವಹಿಸಿದ್ದರು.