

ಮಂಡ್ಯ: ತಾಲೂಕಿನ ಹೊಸಬೂದನೂರು ಗ್ರಾಮದ ಬಳಿ ನಾಯಿಗಳು ಅಟ್ಟಾಡಿಸಿದ ವೇಳೆ ಕುರಿಮಂದೆ ಚದುರಿದ ಪರಿಣಾಮ 17 ಕುರಿಗಳು ರೈಲ್ವೆ ಹಳಿ ದಾಟಲೆತ್ನಿಸಿದಾಗ ರೈಲಿಗೆ ಸಿಲುಕಿ ಮೃತಪಟ್ಟಿವೆ. ಗ್ರಾಮದ ಜಯಮ್ಮ ಅವರಿಗೆ ಸೇರಿದ ಕುರಿ ಮೃತಪಟ್ಟಿದ್ದು, ಸುಮಾರು 2 ಲಕ್ಷ ರೂ.ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ.
ಜಯಮ್ಮ ಅವರು ಬಯಲಿನಲ್ಲಿ ಕುರಿ ಮಂದೆಯನ್ನು ಮೇಯಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ನಾಯಿಗಳು ಅಟ್ಟಾಡಿಸಿದಾಗ ಚದುರಿದ ಕುರಿಗಳು ರೈಲಿಗೆ ಸಿಲುಕಿ ಮೃತಪಟ್ಟಿವೆ. ಸ್ಥಳಕ್ಕೆ ರೈಲ್ವೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.