17 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

mng--1 june jeson peter
Published on

ಮಂಗಳೂರು: ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯನ್ನು ನಗರ ಉತ್ತರ ಠಾಣಾ ಪೊಲೀಸರು ಬಂಸಿದ್ದಾರೆ.


ಬಂಟ್ವಾಳ ತಾಲೂಕು ಮೇರಮಜಲು ಪಕ್ಕಲಪಾದೆ ನಿವಾಸಿ ಜೆಸನ್ ಪೀಟರ್ ಡಿಸೋಜ (42) ಬಂಧಿತ ಆರೋಪಿ.
ಈತ ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುಷ್ಕೃತ್ಯದಲ್ಲಿ ಭಾಗಿಯಾಗಿ 17ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ, ಪೊಲೀಸರಿಗೂ ಸಿಗದೆ ತಲೆ ಮರೆಸಿಕೊಂಡಿದ್ದ. ನ್ಯಾಯಾಲಯ ಈತನಿಗೆ ಎಲ್‌ಪಿಸಿ ಪ್ರಕರಣವೆಂದು ಪರಿಗಣಿಸಿತ್ತು. ಪೊಲೀಸರು ಕೊನೆಗೂ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಆರ್ ಜೈನ್ ಆರೋಪಿ ಪತ್ತೆಹಚ್ಚಿದ ತಂಡವನ್ನು ಶ್ಲಾಸಿದ್ದಾರೆ. ಕಾರ್ಯಾಚರಣೆಯಲ್ಲಿ ಕೇಂದ್ರ ವಿಭಾಗ ಎಸಿಪಿ ಮಹೇಶ್ ಕುಮಾರ್ ನಿರ್ದೇಶನದಂತೆ ಉತ್ತರ ಪೊಲೀಸ್ ಠಾಣೆಯ ನಿರೀಕ್ಷಕ ರಾಘವೇಂದ್ರ ಎಂ.ಬೈಂದೂರು ಮಾರ್ಗದರ್ಶನದಂತೆ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ಪಿಎಸ್‌ಐ ಪುನೀತ್ ಗಾಂವಕರ್, ತಿಪ್ಪರೆಡ್ಯೆಪ್ಪ, ಗುರು ಬಿ.ಟಿ. ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net