17 ರಂದು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ಸಭೆ

ctd Thipperudraswamy Degula--
Published on

ಚಿತ್ರದುರ್ಗ: ಚಳ್ಳಕೆರೆ ತಾಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ ಮಾರ್ಚ್ 9 ರಿಂದ 24 ರವರೆಗೆ ನಡೆಯಲಿದ್ದು, ಮಾರ್ಚ್ 16 ರಂದು ರಥೋತ್ಸವ ಜರುಗಲಿದೆ.

ಈ ಕುರಿತಂತೆ ಸಿದ್ಧತೆಗಳನ್ನು ಕೈಗೊಳ್ಳಲು ಫೆ.17 ರಂದು ಬೆಳಗ್ಗೆ 11 ಗಂಟೆಗೆ ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನದ ಒಳಮಠ ಆವರಣದಲ್ಲಿ ಪೂರ್ವಭಾವಿ ಸಭೆ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ಮತ್ತಿತರ ಜನಪ್ರತಿನಿಧಿಗಳು, ಟಿ.ವೆಂಕಟೇಶ್ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಎಡಿಸಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

----

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net