

ಉಡುಪಿ: ಜಿಲ್ಲೆಯಲ್ಲಿ ಭಾನುವಾರ 170 ಮಂದಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ.
ಮಣಿಪಾಲ ಎಂಐಟಿ ಕ್ಯಾಂಪಸ್ ಪರಿಸರದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದರಲ್ಲಿ 145 ಮಂದಿ ಮಣಿಪಾಲ ಎಂಐಟಿ ಕ್ಯಾಂಪಸ್ ವಿದ್ಯಾರ್ಥಿಗಳು, ಒಬ್ಬರು ಪ್ರಾಧ್ಯಾಪಕರು. ಈ ಹಿಂದೆ ಪಾಸಿಟಿವ್ ಬಂದಿದ್ದ ಪ್ರಾಥಮಿಕ ಸಂಪರ್ಕಿತರಲ್ಲಿ ಬಹುತೇಕರು ಸೋಂಕಿತರಾಗಿದ್ದಾರೆ. ಒಟ್ಟು 300 ವಿದ್ಯಾರ್ಥಿಗಳು ಇದುವರೆಗೆ ಸೋಂಕಿತರಾಗಿದ್ದಾರೆ. ಎಲ್ಲರೂ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 24,215ಕ್ಕೆೆ ಏರಿದೆ. 1973 ಮಂದಿಯ ಗಂಟಲ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಸಂಗ್ರಹಿಸಲಾಗಿದ್ದು, 24 ಮಂದಿ ಆಸ್ಪತ್ರೆಯಿಂದ ಗುಣವಾಗಿ ಮನೆಗಳಿಗೆ ತೆರಳಿದ್ದಾರೆ. ಜಿಲ್ಲೆಯಲ್ಲಿ 358 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.