ಶಿಕ್ಷಣದಿಂದ ಸ್ವಾವಲಂಬಿ ಬದುಕು : ಅಶ್ವಥ್ ಕುಮಾರ್ ಹೇಳಿಕೆ

07
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಸಾಮಾಜಿಕ ವ್ಯವಸ್ಥೆಯಲ್ಲಿ ಆರೋಗ್ಯಪೂರ್ಣ ಜೀವನ ರೂಪಿಸಲು ಸರಳ ಉಪಕ್ರಮಗಳನ್ನು ತನ್ನ ಜೀವನಮುಖಿ ಸಂದೇಶದ ಮೂಲಕ ತೋರಿಸಿಕೊಟ್ಟವರು ಬ್ರಹ್ಮಶ್ರೀ ನಾರಾಯಣಗುರುಗಳು. ಉದ್ಯೋಗ, ಶಿಕ್ಷಣ ಮೂಲಕ ಸಮುದಾಯ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬಹುದು ಎಂದು ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಮುಖ ್ಯಕಾರ್ಯನಿರ್ವಹಣಾಧಿಕಾರಿ ಅಶ್ವಥ್ ಕುಮಾರ್ ಹೇಳಿದರು.

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಗುರು ಜಯಂತಿ, ನೂತನ ಆಡಳಿತ ಮಂಡಳಿ ಪದಪ್ರದಾನ ಸಮಾರಂಭದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದರು.

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಕಾರ್ಯಕ್ರಮ ಉದ್ಘಾಟಿಸಿದರು. 2025-27ನೇ ಸಾಲಿನ ನೂತನ ಆಡಳಿತ ಮಂಡಳಿ ಪದಪ್ರದಾನ ನೆರವೇರಿಸಲಾಯಿತು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ, ಮಹಿಳಾ ಬಿಲ್ಲವ ವೇದಿಕೆ ಪದಾಧಿಕಾರಿಗಳಿಗೆ ಸಂಘದ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ಪ್ರಮಾಣವಚನ ಬೋಧಿಸಿದರು.

ಬಳಂಜ ಸಂಘದ ನೂತನ ಕಾರ್ಯದರ್ಶಿ ರಂಜಿತ್ ಪೂಜಾರಿ, ನಿರ್ಗಮಿತ ಕಾರ್ಯದರ್ಶಿ ಜಗದೀಶ್ ಪೂಜಾರಿ ಬಳ್ಳಿದಡ್ಡ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ಸಂಘದ ನಿರ್ದೇಶಕರು, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಕೋಶಾಧಿಕಾರಿ ಪ್ರವೀಣ್ ಕುಮಾರ್ ಎಚ್.ಎಸ್. ಸ್ವಾಗತಿಸಿದರು. ರಘುನಾಥ ಶಾಂತಿ ಮತ್ತು ತಂಡದವರು ಪೂಜಾ ಪದ್ಧತಿ ನೇರವೇರಿಸಿದರು. ಸಂಘದ ಮಾಜಿ ಕಾರ್ಯದರ್ಶಿ ಸದಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿದರು.

ಬ್ರಹ್ಮಶ್ರೀ ನಾರಾಯಣಗುರುಗಳು ಕೇವಲ ಬಿಲ್ಲವ ಸಮಾಜಕ್ಕೆ ಮಾತ್ರ ಗುರುವಲ್ಲ, ಸಮಸ್ತ ಹಿಂದು ಸಮಾಜದ ಗುರುಗಳು. ಅವರ ಜೀವನವೇ ಒಂದು ಸಂದೇಶ. ಶಿಕ್ಷಣ, ಸಂಘಟನೆಯಿಂದ ಸಮಾಜದ ಉನ್ನತೀಕರಣ ಸಾಧ್ಯ ಎಂದು ಜಗತ್ತಿಗೆ ಸಂದೇಶ ನೀಡಿದ ಮಹಾನ್ ದಾರ್ಶನಿಕ ಸಂತ ಬ್ರಹ್ಮಶ್ರೀ ನಾರಾಯಣಗುರುಗಳು. ಸದಾನಂದ ಪೂಜಾರಿ ಉಂಗಿಲಬೈಲು ಯುವವಾಹಿನಿ ಬೆಳ್ತಂಗಡಿ ಘಟಕದ ಪೂರ್ವಾಧ್ಯಕ್ಷ https://www.vijayavani.net/mangalore-district-level-forest-games https://www.vijayavani.net/missing-mans-body-found-in-stream

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net