

ಕೆ.ಆರ್.ನಗರ : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.17ರಂದು ಅರ್ಥಪೂರ್ಣವಾಗಿ ಕೆ.ಆರ್.ನಗರ ಪಟ್ಟಣದಲ್ಲಿ ಆಚರಿಸಲು ಶಾಸಕ ಡಿ.ರವಿಶಂಕರ್ ಅಧ್ಯಕ್ಷತೆಯಲ್ಲಿ ಆಡಿಳಿತ ಸೌಧ ಸಭಾಂಗಣದಲ್ಲಿ ಮಂಗಳವಾರ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.
ಶಾಸಕ ಡಿ.ರವಿಶಂಕರ್ ಮಾತನಾಡಿ, ಅಂದು 9.30 ಕ್ಕೆ ಜೂನಿಯರ್ ಕಾಲೇಜು ಮೈದಾನದ ಬಳಿ ಎಲ್ಲರು ಜಮಾವಣೆಗೊಂಡು ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಬಳಿಯಿಂದ ವಾಲ್ಮೀಕಿ ಅವರ ಭಾವಚಿತ್ರವನ್ನು ಅಲಂಕೃತಗೊಂಡ ಬೆಳ್ಳಿ ರಥದಲ್ಲಿ ಮಂಗಳವಾದ್ಯ, ಕುಂಭಕಳಸ, ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ಆರಂಭವಾಗಲಿದೆ. ನಂತರ ನಾಲ್ವಡಿ ಕೃಷ್ಣರಾಜ ಒಡೆಯರ ವೃತ್ತ, ಡಾ.ಬಾಬು ಜಗಜೀವನರಾಮ್ ವೃತ್ತದ ಮೂಲಕ ತೆರಳಿ ವಿವಿ ರಸ್ತೆ ಹಾಗೂ ಆಂಜನೇಯ ಬಡಾವಣೆಯ ಪ್ರಮುಖ ರಸ್ತೆಯಲ್ಲಿ ತೆರಳಿ ಬಜಾರ್ ರಸ್ತೆಯ ಮೂಲಕ ಡಾ.ರಾಜಕುಮಾರ್ ಬಾನಂಗಳಕ್ಕೆ ತಲುಪಲಿದೆ ಎಂದು ತಿಳಿಸಿದರು.
ಪುರಸಭೆಯ ಡಾ.ರಾಜಕುಮಾರ್ ಬಾನಂಗಳದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮವನ್ನು ಮಧ್ಯಾಹ್ನ 2 ಗಂಟೆಯ ಒಳಗೆ ಮುಗಿಸಲು ಎಲ್ಲರೂ ಸಹಕಾರ ನೀಡಬೇಕು. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳು ಮತ್ತು ಸಾಧಕರಿಗೆ ಸನ್ಮಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಸಾಲಿಗ್ರಾಮ ತಾಲೂಕು ಅಧ್ಯಕ್ಷ ಸಿ.ಸಿ.ಮಹದೇವ್, ಕೆ.ಆರ್.ನಗರ ತಾಲೂಕು ಅಧ್ಯಕ್ಷ ನರಸಿಂಹನಾಯಕ, ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕಲ್ಲಹಳ್ಳಿ ಶ್ರೀನಿವಾಸ್, ಶಿಕ್ಷಕರ ಸಂಘದ ನಿರ್ದೇಶಕ ಕೃಷ್ಣನಾಯಕ, ಶಿಕ್ಷಕ ಪ್ರಕಾಶ್, ಶಿಕ್ಷಣ ಸಂಯೋಜಕ ದಾಸಪ್ಪ, ಹಂಪಾಪುರ ವಿಎಸ್‌ಎಸ್‌ಎನ್ ನಿರ್ದೇಶಕ ದೇವರಾಜು ಕಾರ್ಯಕ್ರಮದಲ್ಲಿ ಮಾತನಾಡಿ ಜಯಂತಿ ಆಚರಣೆಗೆ ಸಲಹೆ ಸೂಚನೆ ನೀಡಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎಸ್.ಮಹೇಶ್, ಪುರಸಭಾ ಸದಸ್ಯ ಶಂಕರ್‌ಸ್ವಾಮಿ, ಮಾಜಿ ಅಧ್ಯಕ್ಷ ನರಸಿಂಹರಾಜು, ಸಾಲಿಗ್ರಾಮ ತಹಸೀಲ್ದಾರ್ ನರಗುಂದ್, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ್, ಬಿಇಒ ಆರ್.ಕೃಷ್ಣಪ್ಪ, ಟಿಎಸ್‌ಡಬ್ಲ್ಯೂ ಎಸ್.ಸುಮಿತ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಡಿಂಡಿಮಶಂಕರ್, ನಗರ ಘಟಕದ ಅಧ್ಯಕ್ಷ ಸಿ.ವಿ.ಮೋಹನ್‌ಕುಮಾರ್, ಸಮಾಜದ ಮುಖಂಡರಾದ ಗಾರೆನಾಗರಾಜು, ಎ.ಟಿ.ಶಿವಣ್ಣ, ದಿನೇಶ್, ರಾಜನಾಯಕ, ಬೆಟ್ಟನಾಯಕ, ಕೃಷ್ಣನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.